(ನ್ಯೂಸ್ ಕಡಬ) newskadaba.com, ಸೆ.02: ಮೈಸೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಮೈಸೂರು ಅರಮನೆಗೆ ಭೇಟಿ ನೀಡಿದ್ದರು.
ಈ ಬಗ್ಗೆ ರಾಜವಂಶಸ್ಥೆ ಪ್ರಮೋದಾದೇವಿ ಸಂತೋಷ ವ್ಯಕ್ತಪಡಿಸಿದ್ದಾರೆ. ಗಣ್ಯರನ್ನು ಸ್ವಾಗತಿಸಲು ನನಗೆ ಅಪಾರ ಸಂತೋಷ ಮತ್ತು ಹೆಮ್ಮೆ ಆಗಿದೆ. ನನ್ನ ಆಹ್ವಾನವನ್ನು ಸ್ವೀಕರಿಸಿ ಗೌರವಿಸಿದ್ದಕ್ಕಾಗಿ ಹೃತ್ಪೂರ್ವಕ ಧನ್ಯವಾದಗಳು ಎಂದು ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.













