8 ವರ್ಷಗಳ ಬಳಿಕ ಜಿಎಸ್‌ಟಿ ವ್ಯವಸ್ಥೆಯಲ್ಲಿ ಪರಿಷ್ಕರಣೆ



(ನ್ಯೂಸ್ಕಡಬ) newskadaba.com, ಸೆ. 03: ದೇಶದ ತೆರಿಗೆ ವ್ಯವಸ್ಥೆಯಲ್ಲಿ ಅತಿದೊಡ್ಡ ಬದಲಾವಣೆಗೆ ಕೇಂದ್ರ ಮುಂದಾಗಿದೆ. 8 ವರ್ಷಗಳ ಬಳಿಕ ಜಿಎಸ್‌ಟಿ ವ್ಯವಸ್ಥೆಯಲ್ಲಿ ಪರಿಷ್ಕರಣೆಯಾಗಲಿದೆ. ಜಿಎಸ್‌ಟಿ ಮಂಡಳಿಯು ಇಂದಿನಿಂದ ಎರಡು ದಿನಗಳ ಸಭೆಯನ್ನು ಪ್ರಾರಂಭಿಸಲಿದೆ.







ದಿನನಿತ್ಯದ ಅಗತ್ಯ ವಸ್ತುಗಳು ಮತ್ತು ಎಲೆಕ್ಟ್ರಾನಿಕ್ ಸರಕುಗಳನ್ನು ಅಗ್ಗವಾಗಿಸುವ ಮತ್ತು ಆಯ್ದ ಐಷಾರಾಮಿ ವಸ್ತುಗಳ ಮೇಲೆ ಹೆಚ್ಚಿನ ಸುಂಕಗಳನ್ನು ಪರಿಚಯಿಸುವ ಮೂಲಕ ವ್ಯಾಪಕ ತೆರಿಗೆ ಪರಿಷ್ಕರಣೆಯ ವಿಚಾರ ಚರ್ಚಿಸಲಾಗುವುದು. ಜೊತೆಗೆ ಸಭೆಯಲ್ಲಿ ಸ್ಲ್ಯಾಬ್ ಬದಲಾವಣೆ ಬಗ್ಗೆ ಬಹುಮತದಿಂದ ನಿರ್ಧಾರ ಕೈಗೊಳ್ಳಲಾಗುವುದು. ಕೌನ್ಸಿಲ್‌ನ ಒಪ್ಪಿಗೆಯ ನಂತರ ಹೊಸ ದರಗಳ ಕುರಿತಾದ ಅಧಿಸೂಚನೆಗಳು 5-7 ದಿನಗಳಲ್ಲಿ ಜಾರಿಗೊಳ್ಳಬಹುದು. ಹೊಸ ನಿಯಮಗಳು ಸೆಪ್ಟೆಂಬರ್ 22 ರಿಂದ ಜಾರಿಗೆ ಬರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.






ನಾಲ್ಕು ಸ್ಲ್ಯಾಬ್‌ಗಳ ಬದಲು ಎರಡು ಸ್ಲ್ಯಾಬ್‌ಗಳಿಗೆ ಇಳಿಕೆಗೆ ಕೇಂದ್ರ ಮುಂದಾಗಿದೆ. 5%, 12%, 18%, 28% ತೆರಿಗೆ ಪದ್ಧತಿಯ ಬದಲು 5% ಮತ್ತು 18% ಸ್ಲ್ಯಾಬ್‌ಗಳನ್ನು ಉಳಿಸಿಕೊಳ್ಳಲು ಈಗಾಗಲೇ ಕೇಂದ್ರ ನಿರ್ಧರಿಸಿದೆ. 12% ವ್ಯಾಪ್ತಿಯಲ್ಲಿರುವ ಎಲ್ಲ ವಸ್ತುಗಳು 5% ಗೆ ಮತ್ತು 28% ನಲ್ಲಿರುವ ಎಲ್ಲ ವಸ್ತುಗಳ ತೆರಿಗೆಯನ್ನು 18% ಇಳಿಸಲು ತಿರ್ಮಾನಿಸಲಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

error: Content is protected !!
Scroll to Top