(ನ್ಯೂಸ್ ಕಡಬ) newskadaba.com, ಸೆ. 03: ರಾಷ್ಟ್ರರಾಜಧಾನಿ ನವದೆಹಲಿಯಲ್ಲಿ ಮಂಗಳವಾರ ರಾತ್ರಿ ಸುರಿದ ಮಳೆಯಿಂದಾಗಿ ಯಮುನಾ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ನದಿ ಪ್ರದೇಶದ ಕೆಲವು ಭಾಗಗಳಲ್ಲಿದ್ದ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ.
ನದಿ ಉಕ್ಕಿ ಹರಿಯುತ್ತಿದ್ದಂತೆ ಯಮುನಾ ಬಜಾರ್‌ನಂತಹ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು, ಹಲವು ಮನೆಗಳ ನೆಲ ಮಹಡಿಗಳು ಜಲಾವೃತಗೊಂಡಿವೆ. ವಸ್ತುಗಳು ಹಾನಿಗೊಂಡಿವೆ ಎಂದು ವರದಿಗಳು ತಿಳಿಸಿವೆ. ಓಕ್ಲಾ, ವಝಿರಾಬಾದ್, ಅಥಿನಿಕುಂಡ ಬ್ಯಾರೇಜ್‌ಗಳಿಂದ ಮೂರು ಲಕ್ಷಕ್ಕೂ ಅಧಿಕ ಕ್ಯೂಸೆಕ್ ನೀರು ಹರಿಬಿಡಲಾಗುತ್ತಿದ್ದು, ಯಮುನಾ ಸೇತುವೆಯಲ್ಲಿ ನದಿಯ ನೀರು 205.81 ಮೀಟರ್‌ನಲ್ಲಿ ಹರಿಯುತ್ತಿದೆ.










