*ನಿರಂತರ ಮಳೆಗೆ ಬೆಳೆ ಹಾನಿ- ರೈತರ ಸಾಲ ಮನ್ನಾಗೆ JDS ಆಗ್ರಹ, ರಾಜ್ಯ ಪ್ರವಾಸಕ್ಕೆ ನಿಖಿಲ್ ಕುಮಾರಸ್ವಾಮಿ



(ನ್ಯೂಸ್‌ ಕಡಬ) newskadaba.com, ಸೆ. 03 ಬೆಂಗಳೂರು: ನೆರೆಹಾನಿ ಪ್ರದೇಶಗಳ ರೈತರು, ಸಂತ್ರಸ್ತರ ಸಮಸ್ಯೆಗಳಿಗೆ ಸ್ಪಂದಿಸುವ ಸಲುವಾಗಿ ರಾಜ್ಯ ಪ್ರವಾಸ ಕೈಗೊಳ್ಳುವುದಾಗಿ ಜೆಡಿಎಸ್ ಪಕ್ಷದ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿಯವರು ಬುಧವಾರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಾದ್ಯಂತ ಭಾರೀ ಮಳೆ ಮತ್ತು ಪ್ರವಾಹದಿಂದ “ವ್ಯಾಪಕ ಬೆಳೆ ಹಾನಿ” ಸಂಭವಿಸಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ರೈತರ ಸಾಲ ಮನ್ನಾ ಮಾಡಬೇಕೆಂದು ಒತ್ತಾಯಿಸಿದ್ದಾರೆ.
ರಾಜ್ಯದಲ್ಲಿ ಮುಂಗಾರು ಮಳೆಯ ಅತಿವೃಷ್ಟಿಯಿಂದ ಲಕ್ಷಾಂತರ ಹೆಕ್ಟರ್‌ ಪ್ರದೇಶದಲ್ಲಿ ರೈತರ ಬೆಳೆ ನಷ್ಟವಾಗಿದ್ದು, ನೆರೆಹಾನಿಯಿಂದ ಜನಸಾಮಾನ್ಯರು ಸಹ ಮನೆಗಳನ್ನು ಕಳೆದುಕೊಂಡು ಸಂಕಷ್ಟ ಅನುಭವಿಸುತ್ತಿದ್ದಾರೆ. ರೈತ ವಿರೋಧಿ ಕಾಂಗ್ರೆಸ್‌ ಸರ್ಕಾರ ಹಾಗೂ ಜಿಲ್ಲಾ ಉಸ್ತುವಾರಿ ಮಂತ್ರಿಗಳು ನೆರವಿಗೆ ಧಾವಿಸದೆ, ಪರಿಹಾರಗಳನ್ನು ಒದಗಿಸಿದೆ ನಿರ್ಲಕ್ಷ್ಯವಹಿಸಿದೆ ಎಂದು ಕಿಡಿಕಾರಿದ್ದಾರೆ.
ಈ ಹಿನ್ನೆಲೆಯಲ್ಲಿ ನೆರೆ ಸಂತ್ರಸ್ತರ ಸಮಸ್ಯೆಗಳನ್ನು ಆಲಿಸಲು ಜನತಾದಳ ಜಾತ್ಯತೀತ ಪಕ್ಷದ ವತಿಯಿಂದ ರಾಜ್ಯ ಪ್ರವಾಸ ಕೈಗೊಳ್ಳಲಾಗಿದ್ದು, ಬೆಳೆ ಹಾನಿ, ಮನೆ ಕುಸಿತ ಪ್ರದೇಶಗಳಿಗೆ ಭೇಟಿ ನೀಡಿ ವಸ್ತು ಸ್ಥಿತಿ ವರದಿಯನ್ನು ರಾಜ್ಯ ಸರ್ಕಾರಕ್ಕೆ ನೀಡಲಿದ್ದೇವೆಂದು ಹೇಳಿದ್ದಾರೆ.







error: Content is protected !!
Scroll to Top