ಸಚಿವ ಸ್ಥಾನ ಕಳೆದುಕೊಂಡರೂ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಸತತ 7ನೇ ಬಾರಿ ಕೆ.ಎನ್ ರಾಜಣ್ಣ ಗೆಲುವು



(ನ್ಯೂಸ್‌ ಕಡಬ) newskadaba.com,  ಸೆ. 4ತುಮಕೂರು: ಇತ್ತೀಚಿಗೆ ಕಾಂಗ್ರೆಸ್ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿ ಸಚಿವ ಸ್ಥಾನ ಕಳೆದುಕೊಂಡಿದ್ದ ಕೆ.ಎನ್. ರಾಜಣ್ಣ, ತುಮಕೂರು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ (DCC Bank) ಅಧ್ಯಕ್ಷ ಸ್ಥಾನಕ್ಕೆ 7ನೇ ಬಾರಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.







ಇಂದು ನಡೆದ ಚುನಾವಣೆಯಲ್ಲಿ, 14 ಜನ ನಿರ್ದೇಶಕರನ್ನು ಒಳಗೊಂಡ ಆಡಳಿತ ಮಂಡಳಿಯು ರಾಜಣ್ಣ ಅವರನ್ನು ಅಧ್ಯಕ್ಷರಾಗಿ ಆಯ್ಕೆ ಮಾಡಿದ್ದು, ಅವರ ಅಭಿಮಾನಿಗಳ ಸಂಭ್ರಮ ಹೇಳ ತೀರದಾಗಿದೆ. ರಾಜಣ್ಣ ಅವರ ಸಾಧನೆ ತುಮಕೂರು ಜಿಲ್ಲೆಯ ಸಹಕಾರಿ ಕ್ಷೇತ್ರದಲ್ಲಿ ಅವರ ಪ್ರಾಬಲ್ಯವನ್ನು ಮತ್ತೊಮ್ಮೆ ಸಾಬೀತುಪಡಿಸಿದೆ.






ಕೆ.ಎನ್. ರಾಜಣ್ಣ ಕರ್ನಾಟಕದ ಸಹಕಾರಿ ಕ್ಷೇತ್ರದಲ್ಲಿ 1972ರಿಂದಲೂ ತಮ್ಮ ಪ್ರಭಾವವನ್ನು ಸ್ಥಾಪಿಸಿದ್ದಾರೆ. ರಾಷ್ಟ್ರೀಯ ಕೃಷಿ ಸಹಕಾರ ಮಾರ್ಕೆಟಿಂಗ್ ಫೆಡರೇಶನ್ ಆಫ್ ಇಂಡಿಯಾದ ನಿರ್ದೇಶಕರಾಗಿ ಮತ್ತು ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್‌ಅಧ್ಯಕ್ಷರಾಗಿ (2001-2005 ಮತ್ತು 2015-2020) ಎರಡು ಅವಧಿಗಳಲ್ಲಿ ಸೇವೆ ಸಲ್ಲಿಸಿದ ಅನುಭವವನ್ನು ಅವರು ಹೊಂದಿದ್ದಾರೆ.

ಹಿಂದೆ ಆರು ಬಾರಿ ಸ್ಥಾನವನ್ನು ಅಲಂಕರಿಸಿದ್ದ ರಾಜಣ್ಣ, ತಮ್ಮ ಅನುಭವ ಮತ್ತು ನಾಯಕತ್ವದ ಮೂಲಕ ಬ್ಯಾಂಕ್‌ಕಾರ್ಯನಿರ್ವಹಣೆಯನ್ನು ಸುಧಾರಿಸಿದ್ದಾರೆ.

 

error: Content is protected !!
Scroll to Top