ಸರಸ್ವತಿ ವಿದ್ಯಾಲಯದಲ್ಲಿ ಶಿಕ್ಷಕರ ದಿನಾಚರಣೆ



(ನ್ಯೂಸ್ ಕಡಬ) newskadaba.com ಕಡಬ, ಸೆ. 08. ಸರಸ್ವತೀ ವಿದ್ಯಾಲಯ ಪ್ರೌಢಶಾಲೆಯಲ್ಲಿ ಶಿಕ್ಷಕರ ದಿನಾಚರಣೆಯನ್ನು ಸೆಪ್ಟೆಂಬರ್ 6ರಂದು ಆಚರಿಸಲಾಯಿತು.





10ನೇ ತರಗತಿಯ ವಿದ್ಯಾರ್ಥಿಗಳಾದ ಸಿಂಚನಾ ಕೆ.ಎಸ್ ಮತ್ತು ರಕ್ಷಾ ಎಂ.ಜೆ. ಸರ್ವೆಪಲ್ಲಿ ರಾಧಾಕೃಷ್ಣನ್ ಅವರ ಜೀವನದ ಘಟನೆಗಳನ್ನು ಹೇಳುತ್ತಾ ಶಿಕ್ಷಕರ ದಿನಾಚರಣೆಯ ಮಹತ್ವವನ್ನು ತಿಳಿಸಿದರು.






ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕಿ ಶ್ರೀಮತಿ ಶೈಲಾ ಶ್ರೀ ರೈ ಎಸ್. ಹಾಗೂ ಎಲ್ಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

error: Content is protected !!
Scroll to Top