(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 09. ಎಂ.ಎಸ್.ಎಂ.ಇ ಗಳ ಕಾರ್ಯಕ್ಷಮತೆಯನ್ನು ಹೆಚ್ಚಿಸಲು ಮತ್ತು ವೇಗಗೊಳಿಸಲು ರ್ಯಾಂಪ್ (RAMP) ಯೋಜನೆಯಡಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಕರ್ನಾಟಕ ಸರ್ಕಾರ, ಜಿಲ್ಲಾ ಕೈಗಾರಿಕಾ ಕೇಂದ್ರ, ಕರ್ನಾಟಕ ತಾಂತ್ರಿಕ ಉನ್ನತೀಕರಣ ಪರಿಷತ್ (TECSOK), ಬೆಂಗಳೂರು ಹಾಗೂ ಜಿಲ್ಲಾ ಸಣ್ಣ ಕೈಗಾರಿಕಾ ಸಂಘದ ಸಹಯೋಗದಲ್ಲಿ ಸೆಪ್ಟೆಂಬರ್ 16ರಂದು ಬೆಳಿಗ್ಗೆ 10 ಗಂಟೆಗೆ ಟ್ರೆಡ್ಸ್ ಕಾರ್ಯಗಾರ ಮತ್ತು ಸೆಪ್ಟೆಂಬರ್ 17 ರಂದು ಅಪರಾಹ್ನ 3 ಗಂಟೆಗೆ ಇಎಸ್ಎಂ ಕಾರ್ಯಗಾರವನ್ನು ಕೈಗಾರಿಕೋದ್ಯಮಿಗಳಲ್ಲಿ ಅರಿವು ಮೂಡಿಸುವ ಸಲುವಾಗಿ ನಗರದ ಯೆಯ್ಯಾಡಿ ಇಂಡಸ್ಟ್ರೀಯಲ್ ಎಸ್ಟೇಟ್ ಜಿಲ್ಲಾ ಸಣ್ಣ ಕೈಗಾರಿಕಾ ಸಂಘದ ಸಭಾಭವನದಲ್ಲಿ ಆಯೋಜಿಸಲಾಗಿದೆ.
ನೋಂದಾಯಿತ ಎಂ.ಎಸ್.ಎಂ.ಇ (MSME) ಗಳು ಭಾಗವಹಿಸಬಹುದು.
ಹೆಚ್ಚಿನ ಮಾಹಿತಿಗೆ ಜಿಲ್ಲಾ ಕೈಗಾರಿಕಾ ಕೇಂದ್ರ, ಮಂಗಳೂರು ದೂರವಾಣಿ ಸಂಖ್ಯೆ: 0824-2214021 ಸಂಪರ್ಕಿಸಬಹುದು ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.













