ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಹಾಸ್ಟೆಲ್ ಪ್ರವೇಶ: ಅರ್ಜಿ ಆಹ್ವಾನ



(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 09. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ಹಾಸ್ಟೆಲ್‍ಗಳ (ವೃತ್ತಿಪರ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾತಿ/ಪ.ವರ್ಗ ಸೇರಿದ ವಿದ್ಯಾರ್ಥಿಗಳಿಂದ 2025-26ನೇ ಸಾಲಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಪ್ರವರ್ಗ-1, ಎಸ್.ಸಿ ಮತ್ತು ಎಸ್.ಟಿ ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ 2.50 ಲಕ್ಷ ರೂ. ಇರಬೇಕು. ಪ್ರವರ್ಗ-2ಎ, 2ಬಿ, 3ಎ, 3ಬಿ, ಇತರೆ ಹಿಂದುಳಿದ ವರ್ಗ ಹಾಗೂ ಇತರೆ ರೂ. 1 ಲಕ್ಷ. ವಿದ್ಯಾರ್ಥಿಗಳು ವೆಬ್‍ಸೈಟ್ https://shp.karnataka.gov.in/bcwd ಮೂಲಕ ಅರ್ಜಿ ಸಲ್ಲಿಸಬಹುದು. ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಅಕ್ಟೋಬರ್ 4 ಕೊನೆಯ  ದಿನ.







ತಾಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್‍ಸೈಟ್ https://bcwd.karnataka.gov.in/ ನ್ನು ನೋಡಬಹುದು. ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ bcwdhelpline@gmail.com ಇ-ಮೇಲ್ ಮುಂಖಾತರ ಅಥವಾ ಜಿಲ್ಲಾ/ತಾಲೂಕು ಅಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸಬಹುದು.






error: Content is protected !!
Scroll to Top