ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜಿಸಬೇಡಿ ಎಂದಿದ್ದಕ್ಕೆ ಯುವಕನ ಗುಂಡಿಕ್ಕಿ ಹತ್ಯೆ..!



(ನ್ಯೂಸ್‌ ಕಡಬ) newskadaba.com ಸೆ. 09. ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜಿಸಬೇಡಿ ಎಂದು ಹೇಳಿದ್ದಕ್ಕೆ ಹರಿಯಾಣದ ಯುವಕನನ್ನು ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ನಡೆದಿದೆ.





ಕೊಲೆಯಾದ ಯುವಕನನ್ನು ಹರಿಯಾಣದ ಜಿಂದ್ ಜಿಲ್ಲೆಯ ಬರಾಹ್ ಕಲಾ ಗ್ರಾಮದ ಕಪಿಲ್ ಎಂದು ಗುರುತಿಸಲಾಗಿದೆ. ಕಪಿಲ್ ಕೆಲಸ ಮಾಡುತ್ತಿದ್ದ ಸ್ಟೋರ್‌ ನ ಹೊರಗಡೆ ವ್ಯಕ್ತಿಯೊಬ್ಬ ಮೂತ್ರ ವಿಸರ್ಜನೆ ಮಾಡುತ್ತಿದ್ದ. ಇದನ್ನು ಗಮನಿಸಿದ ಕಪಿಲ್ ಆತನ ಬಳಿ, ಸಾರ್ವಜನಿಕ ಸ್ಥಳವಾದ ಇಲ್ಲಿ ಮೂತ್ರ ವಿಸರ್ಜಿಸಬೇಡ ಎಂದಿದ್ದರು. ಈ ವೇಳೆ ಕೋಪಗೊಂಡ ವ್ಯಕ್ತಿ ಕಪಿಲ್‌ನ ಮೇಲೆ ಗುಂಡಿನ ದಾಳಿ ನಡೆಸಿದ್ದಾನೆ ಎನ್ನಲಾಗಿದೆ.






ತಕ್ಷಣವೇ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿ, ಕಪಿಲ್‌ನನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಕಪಿಲ್ ಕೊನೆಯುಸಿರೆಳೆದಿದ್ದಾರೆ.

error: Content is protected !!
Scroll to Top