(ನ್ಯೂಸ್ ಕಡಬ) newskadaba.com, ಸೆ.10: ಕಾರಿನ ಮೇಲೆ ಪಾಕಿಸ್ತಾನ ಧ್ವಜ ಪ್ರದರ್ಶಿಸಿ, ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದ ಹಿನ್ನೆಲೆಯಲ್ಲಿ ಗದಗ ನಗರ ಠಾಣೆಯಲ್ಲಿ ಸುಮೊಟೊ ಪ್ರಕರಣ ದಾಖಲಾಗಿದೆ. ಬಕ್ರೀದ್ ಹಬ್ಬದಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ತಹಸೀನ್ ಎಂಬಾತ ತನ್ನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಪಾಕಿಸ್ತಾನ ಧ್ವಜವನ್ನು ಪ್ರದರ್ಶಿಸುತ್ತಿರುವ ಫೋಟೊವನ್ನು ಹಂಚಿಕೊಂಡಿದ್ದಾನೆ. ಈ ಪೋಸ್ಟ್ ಅನ್ನು ಅಬ್ದುಲ್ ಎಂಬ ಇನ್ನೊಬ್ಬ ವ್ಯಕ್ತಿ ತನ್ನ ಖಾತೆಯಲ್ಲಿ ಮತ್ತೊಮ್ಮೆ ಹಂಚಿಕೊಂಡಿದ್ದಾನೆ.
ಈ ಫೋಟೊದಲ್ಲಿ, ಕಾರಿನ ಬಾನೆಟ್ ಮೇಲೆ ಇಸ್ಲಾಂ ಧರ್ಮದ ಬಾವುಟದ ಜತೆಗೆ ಪಾಕಿಸ್ತಾನ ಧ್ವಜದ ಚಿತ್ರವು ಕಂಡುಬಂದಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಈ ಹಿನ್ನೆಲೆಯಲ್ಲಿ, ಗದಗ ನಗರ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ ಕಾಯ್ದೆಯ ಕಲಂ 299, 353(2) ಮತ್ತು 3/5 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.













