ಮಂಗಳೂರು: ಗ್ಯಾಸ್ ಸಿಲಿಂಡರ್ ಸ್ಫೋಟ ► ಇಬ್ಬರು ಗಂಭೀರ



ಸಾಂದರ್ಭಿಕ ಚಿತ್ರ







(ನ್ಯೂಸ್ ಕಡಬ) newskadaba.com ಮಂಗಳೂರು, ಎ.20. ವೆಲ್ಡಿಂಗ್ ಸೆಂಟರಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ‌ಗ್ಯಾಸ್ ಸಿಲಿಂಡರೊಂದು ಸ್ಪೋಟಗೊಂಡ ಪರಿಣಾಮ ಇಬ್ಬರು ಕಾರ್ಮಿಕರು ಗಂಭೀರ ಗಾಯಗೊಂಡ ಘಟನೆ ನಗರದ ಹೊರವಲಯದ ತೊಕ್ಕೊಟ್ಟು ಎಂಬಲ್ಲಿ ಗುರುವಾರ ಸಂಜೆ ನಡೆದಿದೆ.






ಗಂಭೀರ ಗಾಯಗೊಂಡ ಕಾರ್ಮಿಕರನ್ನು ಸ್ಥಳೀಯ ನಿವಾಸಿಗಳಾದ ನವೀನ್ ಆಚಾರಿ(30) ಹಾಗೂ ಲತೀಶ್ (55) ಎಂದು ಗುರುತಿಸಲಾಗಿದೆ. ಸಹ ಕಾರ್ಮಿಕ ಅರ್ಫಾಣ್ (22) ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ‌. ಇವರು ಗುರುವಾರ ಸಂಜೆ ತೊಕ್ಕೊಟ್ಟು ಸಮೀಪದ ಚೆಂಬುಗುಡ್ಡೆ ಮಸೀದಿ ಬಳಿಯ ಗ್ಯಾರೇಜ್ ಒಂದರಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಗ್ಯಾಸ್ ವೆಲ್ಡಿಂಗ್ ಸಿಲಿಂಡರ್ ಸ್ಫೋಟಿಸಿದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಗಾಯಾಳುಗಳನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

error: Content is protected !!
Scroll to Top