ಬಂಟ್ವಾಳ : ಕಾರು ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಪಾದಾಚಾರಿ ಓರ್ವ ಚಿಕಿತ್ಸೆ ಫಲಿಸದೆ ಮೃತ್ಯು



(ನ್ಯೂಸ್ಕಡಬ) newskadaba.com,  ಸೆ.13 ಬಂಟ್ವಾಳ : ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ.







ಪುತ್ತೂರು ಬೀಟಿಗೆ ನಿವಾಸಿ ಶಂಶುಧ್ದೀನ್ (32) ಮೃತ ದುರ್ದೈವಿ.






ಶಂಶುಧ್ದೀನ್ ಅವರು ಮಾಣಿ ಸಮೀಪದ ಗಡಿಯಾರ ಎಂಬಲ್ಲಿರುವ ಸಂಬಂಧಿಕರ ಮನೆಗೆ ಬಂದಿದ್ದರು. ಸಂಬಂಧಿಕರ ಮನೆಯಲ್ಲಿದ್ದ ಇವರು ಹತ್ತಿರದ ಅಂಗಡಿ ಕಡೆಗೆ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುವ ವೇಳೆ ಕಾರೊಂದು ಡಿಕ್ಕಿಯಾಗಿದೆ ಎನ್ನಲಾಗಿದೆ.

ಕಾರು ಡಿಕ್ಕಿಯಾದ ಪರಿಣಾಮ ಶಂಶುಧ್ದೀನ್ ಅವರಿಗೆ ಗಂಭೀರ ಗಾಯವಾಗಿದೆ. ತಕ್ಷಣ ತುಂಬೆ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆಯಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಬಗ್ಗೆ ಪೋಲೀಸರು ಮಾಹಿತಿ ನೀಡಿದ್ದಾರೆ.

ವಿಟ್ಲ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

 

error: Content is protected !!
Scroll to Top