ಇಂದು ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ!



(ನ್ಯೂಸ್ಕಡಬ) newskadaba.com,  ಸೆ.15 ಬೆಂಗಳೂರು: ರಾಜ್ಯದಲ್ಲಿ ಇಂದು ಮತ್ತು ನಾಳೆ (ಸೆ.15 ಮತ್ತು 16) ಕರಾವಳಿ ಜಿಲ್ಲೆಗಳು ಹೊರತುಪಡಿಸಿ ಉಳಿದೆಲ್ಲಾ ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್‌ ಘೋಷಿಸಿದೆ. ಇದರಿಂದ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಇನ್ನು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆ ಇದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 28°C ಮತ್ತು 20°C ಇರುವ ಸಾಧ್ಯತೆ ಇದೆ.







ಸೆ. 15ರಂದು ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು ಜಿಲ್ಲೆಗಳಲ್ಲಿ ಭಾರಿ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಬೆಂಗಳೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆ ಸೇರಿ ವಿವಿಧ ಜಿಲ್ಲೆಗಳಲ್ಲಿ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.






ಸೆ. 16ರಂದು ಕರಾವಳಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಭಾರಿ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಸೇರಿ ವಿವಿಧ ಜಿಲ್ಲೆಗಳಲ್ಲಿ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

 

error: Content is protected !!
Scroll to Top