ಬಿಎಂಟಿಸಿ ಬಸ್‌ನಲ್ಲಿ ಕಾಣಿಸಿಕೊಂಡ ಅಗ್ನಿ – 75 ಪ್ರಯಾಣಿಕರು ಅಪಾಯದಿಂದ ಪಾರು



(ನ್ಯೂಸ್‌ ಕಡಬ) newskadaba.com,  ಸೆ.15  ಬೆಂಗಳೂರು : ಚಲಿಸುತ್ತಿದ್ದ ಬಿಎಂಟಿಸಿ ಬಸ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು, ಬಸ್‌ ಸುಟ್ಟು ಕರಕಲಾಗಿರುವ ಘಟನೆ ನಗರದ ಹೆಚ್ಎಎಲ್ ಮುಖ್ಯದ್ವಾರದ ಬಳಿ ನಡೆದಿರುತ್ತದೆ.







ಬೆಳಗ್ಗಿನ ಜಾವ 5:10ಕ್ಕೆ ಅಗ್ನಿ ದುರಂತ ಸಂಭವಿಸಿದೆ. ಬಸ್‌ ಮೆಜೆಸ್ಟಿಕ್‌ನಿಂದ ಕಾಡುಗೋಡಿಗೆ ತೆರಳುತ್ತಿತ್ತು. ಈ ಬಸ್‌ನಲ್ಲಿ  ಸರಿ ಸುಮಾರು 75 ಮಂದಿ ಪ್ರಯಾಣಿಕರಿದ್ದರು ಎಂದು ತಿಳಿದು ಬಂದಿರುತ್ತದೆ.






ಬಸ್‌ ಚಲಿಸುತ್ತಿದ್ದಂತೆ ಎಂಜಿನ್‌ನಲ್ಲಿ ಹೊಗೆ ಕಾಣಿಸಿಕೊಂಡಿದೆ. ಇದರಿಂದ ಎಚ್ಚೆತ್ತ ಚಾಲಕ, ನಿರ್ವಾಹಕರು ತಕ್ಷಣ ಪ್ರಯಾಣಿಕರನ್ನು ಕೆಳಗಿಳಿಸಿದ್ದಾರೆ. ಕ್ರಮೇಣ ಹೆಚ್ಚಿನ ಪ್ರಮಾಣದ ಬೆಂಕಿ ಕಾಣಿಸಿಕೊಂಡು ಬಸ್‌ ಧಗಧಗಿಸಿದೆ. ಚಾಲಕನ ಸಮಯಪ್ರಜ್ಷೆಯಿಂದ 75 ಪ್ರಯಾಣಿಕರು ಸುರಕ್ಷಿತರಾಗಿದ್ದಾರೆ. ನಂತರ ಹೆಚ್ಎಲ್ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಹೆಚ್ಎಎಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

error: Content is protected !!
Scroll to Top