ಉತ್ತರಾಖಂಡ : ಚಮೋಲಿ ಜಿಲ್ಲೆಯಲ್ಲಿ ಭೂಕುಸಿತ, ಮನೆಗಳು ಕುಸಿದು 5 ಮಂದಿ ಕಣ್ಮರೆ



(ನ್ಯೂಸ್‌ ಕಡಬ) newskadaba.com,  ಸೆ.18 ಉತ್ತರಾಖಂಡದ ಚಮೋಲಿ ಜಿಲ್ಲೆಯ ನಂದನಗರದಲ್ಲಿ ಇಂದು ಗುರುವಾರ ಮುಂಜಾನೆ ಸಂಭವಿಸಿದ ಮೇಘಸ್ಫೋಟದಿಂದ ಉಂಟಾದ ಭೂಕುಸಿತದಲ್ಲಿ ಮನೆಗಳು ಕುಸಿದು ಕನಿಷ್ಠ 5 ಜನರು ಕಾಣೆಯಾಗಿದ್ದಾರೆ ಎಂದು ವರದಿಯಾಗಿದೆ.







ನಗರ ಪಂಚಾಯತ್ ನಂದನಗರದ ಕುಂತ್ರಿ ವಾರ್ಡ್‌ನಲ್ಲಿ ಭೂಕುಸಿತವಾಗಿ 6 ಮನೆಗಳು ನಾಶಪಡಿಸಿವೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರ ತಿಳಿಸಿದೆ.






ಭೂಕುಸಿತ ಸಂಭವಿಸಿದ ಸಮಯದಲ್ಲಿ 7 ಮಂದಿ ಮನೆಯ ಒಳಗೆ ಇದ್ದರು, ಅವರಲ್ಲಿ ಇಬ್ಬರನ್ನು ರಕ್ಷಿಸಲಾಗಿದೆ, ಇನ್ನೂ ಐವರು ನಾಪತ್ತೆಯಾಗಿದ್ದಾರೆ.

ಎಸ್‌ಡಿಆರ್‌ಎಫ್ ಮತ್ತು ಎನ್‌ಡಿಆರ್‌ಎಫ್ ತಂಡಗಳು, ವೈದ್ಯಕೀಯ ತಂಡ ಮತ್ತು 3 ಆಂಬ್ಯುಲೆನ್ಸ್‌ಗಳು ಸ್ಥಳಕ್ಕೆ ಧಾವಿಸಿವೆ. ಮೋಖ್ ನದಿಯಲ್ಲಿನ ಪ್ರವಾಹವು ನಂದನಗರ ಪ್ರದೇಶದ ಧುರ್ಮಾ ಗ್ರಾಮದಲ್ಲಿ 6 ಮನೆಗಳನ್ನು ನಾಶಪಡಿಸಿದೆ.

ಕಳೆದ ಆಗಸ್ಟ್ ತಿಂಗಳಲ್ಲಿ ನಂದನಗರದ ಕೆಲವು ಭಾಗಗಳಲ್ಲಿ ಭೂ ಕುಸಿತ ಸಂಭವಿಸಿದ್ದು, ಮನೆಗಳ ಗೋಡೆಗಳಲ್ಲಿ ಬಿರುಕುಗಳು ಕಾಣಿಸಿಕೊಂಡಿವೆ. ಅವುಗಳಲ್ಲಿ ವಾಸಿಸುವ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಬೇಕಾಯಿತು.

error: Content is protected !!
Scroll to Top