ಕೃಷಿ ಸಾಲ ಮನ್ನಾಕ್ಕಿಂತ ಐದು ಗ್ಯಾರಂಟಿ ಯೋಜನೆಗಳುಶೇ.95 ಜನರಿಗೆ ಹೆಚ್ಚು ಸಹಾಯಕ: ಸಚಿವ ಚಲುವರಾಯಸ್ವಾಮಿ



(ನ್ಯೂಸ್‌ ಕಡಬ) newskadaba.com,  ಸೆ.27 ಮೈಸೂರು: ಕೃಷಿ ಸಾಲ ಮನ್ನಾಕ್ಕಿಂತ ಗ್ಯಾರಂಟಿ ಯೋಜನೆಗಳು ಹೆಚ್ಚು ಸಹಾಯಕವಾಗಿದೆ ಎಂದು ಚಲುವರಾಯಸ್ವಾಮಿಯವರು ಶುಕ್ರವಾರ ಹೇಳಿದ್ದಾರೆ.ರೈತ ದಸರಾವನ್ನು ಉದ್ಘಾಟಿಸಿದ ನಂತರ ಮಾತನಾಡಿದ ಅವರು, ಅಭಿವೃದ್ಧಿ ಹೊಂದಿದ ದೇಶಗಳ ಮಾದರಿಯಲ್ಲಿ ಸುಧಾರಿತ ಯಂತ್ರೋಪಕರಣಗಳನ್ನು ಬಳಸಿಕೊಂಡು ಆಧುನಿಕ ಕೃಷಿ ಪದ್ಧತಿಗಳನ್ನು ಅಳವಡಿಸಿಕೊಳ್ಳುವಂತೆ ಕೃಷಿ ರೈತರಿಗೆ ಕರೆ ನೀಡಿದರು.ಯಾಂತ್ರೀಕೃತ ಕೃಷಿಯು ಕಾರ್ಮಿಕರ ಕೊರತೆಯನ್ನು ನೀಗಿಸಲು ಮತ್ತು ರೈತರು ಉತ್ತಮ ಫಸಲು ಪಡೆಯಲು ಅನುವು ಮಾಡಿಕೊಡುವ ಮೂಲಕ ಆರ್ಥಿಕವಾಗಿ ಸಬಲೀಕರಣಗೊಳ್ಳಲು ಸಹಾಯ ಮಾಡುತ್ತದೆ ಎಂದು ಹೇಳಿದರು.







ಪ್ರಸ್ತುತ ಸರ್ಕಾರದಿಂದ ರೈತರಿಗೆ ಅವಶ್ಯಕವಿರುವ ಸೌಲಭ್ಯ ಮತ್ತು ಮಾರ್ಗದರ್ಶನಗಳನ್ನು ಸರ್ಕಾರದಿಂದ ಒದಗಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ರೈತ ದಸರಾ ಎಂಬ ಹೆಸರಿನಲ್ಲಿ ಕೃಷಿಗೆ ಸಂಬಂಧಿಸಿದ ತೋಟಗಾರಿಕೆ, ಮೀನುಗಾರಿಕೆ, ಹೈನುಗಾರಿಕೆ, ರೇಷ್ಮೆ ಸೇರಿದಂತೆ ಎಲ್ಲಾ ಇಲಾಖೆಗಳನ್ನು ಒಗ್ಗೂಡಿಸಿ ವಸ್ತುಪ್ರದರ್ಶನವನ್ನು ಆಯೋಜಿಸಲಾಗಿದ್ದು, ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು. ಭಾರತ ದೇಶದಲ್ಲಿ ದೊಡ್ಡ ಮಟ್ಟದಲ್ಲಿ ರೈತ ಸಮುದಾಯದವರಿದ್ದು, ರೈತ ದಸರಾ ಹಮ್ಮಿಕೊಳ್ಳುವುದರಿಂದ ರೈತರಿಗೆ ಗೌರವ ಸಲ್ಲಿಸಲಾಗುತ್ತಿದೆ ಎಂದು ತಿಳಿಸಿದರು.






ಇನ್ನು ರೈತರು ಬೆಳೆಯುವ ಫಸಲಿಗೆ ಸಂಬಂಧಿಸಿದಂತೆ, ನಮ್ಮ ರೈತರಲ್ಲಿ ಕೆಲವರು ತಾವು ಸಂಗ್ರಹಿಸಿಟ್ಟುಕೊಂಡಂತಹ ಹಳೆ ತಳಿಯ ಬೀಜಗಳನ್ನೇ ಬೆಳೆ ಬೆಳೆಯಲು ಮುಂದಾಗುತ್ತಾರೆ. ಆದರೆ, ಸಂಗ್ರಹಿಸಲ್ಪಟ್ಟ ತಳಿಗಳಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆ ಇರುವುದರಿಂದ, ರೋಗನಿರೋಧಕ ಶಕ್ತಿ ಹೆಚ್ಚಿರುವಂತಹ ಮತ್ತು ಆಧುನಿಕ ಪದ್ಧತಿಯಿಂದ ಸಂಸ್ಕರಿಸಲ್ಪಟ್ಟ ತಳಿಗಳ ಬೇಸಾಯ ಮಾಡುವುದರಿಂದ ಉತ್ತಮ ಫಸಲನ್ನು ಬೆಳೆದು, ಹೆಚ್ಚಿನ ಇಳುವರಿ ಪಡೆದು ಆರ್ಥಿಕವಾಗಿ ಅಭಿವೃದ್ಧಿಗೊಳ್ಳಬೇಕು. ತಂತ್ರಜ್ಞಾನದ ಮೂಲಕ ಸಮಗ್ರ ಕೃಷಿಯನ್ನು ಕೈಗೊಳ್ಳಬೇಕು ಎಂದು ಸಲಹೆ ನೀಡಿದರು.

error: Content is protected !!
Scroll to Top