ಖ್ಯಾತ ಕನ್ನಡ ರಂಗಭೂಮಿ ನಟ, ಕಲಾವಿದ ಯಶವಂತ ಸರದೇಶಪಾಂಡೆ ನಿಧನ



(ನ್ಯೂಸ್‌ ಕಡಬ) newskadaba.com, ಸೆ.29 :  ಸರದೇಶಪಾಂಡೆರವರು, ಅನೇಕ ನಾಟಕಗಳಲ್ಲಿ ನಟಿಸಿ-ನಿರ್ದೇಶಿಸಿ ಜನಪ್ರಿಯರಾಗಿದ್ದ ಹುಬ್ಬಳ್ಳಿ ಮೂಲದ ಯಶವಂತ ಸರದೇಶಪಾಂಡೆ ಅವರು ಇಂದು ಬೆಳಗ್ಗೆ ನಮ್ಮನ್ನು ಅಗಲಿದ್ದಾರೆ.
ಅವರ ಆಲ್ ದಿ ಬೆಸ್ಟ್ ನಾಟಕ ಅಭೂತಪೂರ್ವ ಯಶಸ್ಸು ಕಂಡಿತು. ಕಿರುತೆರೆ ಮತ್ತು ಚಲನಚಿತ್ರಗಳಲ್ಲಿಯೂ ಅವರು ಪಾತ್ರವಹಿಸುತ್ತಿದ್ದರು. ‘ರಾಮ ಶ್ಯಾಮ ಭಾಮಾ’ ನಲ್ಲಿ ನಟಿಸಿ ಖ್ಯಾತಿ ಗಳಿಸಿದ್ದರು.
ಅವರ ನಿಧನಕ್ಕೆ ಕುಟುಂಬ ವರ್ಗ, ಅವರ ಅಭಿಮಾನಿಗಳು, ನಾಡಿನ ಗಣ್ಯರು ಕಂಬನಿ ಮಿಡಿದಿದ್ದಾರೆ.







error: Content is protected !!
Scroll to Top