ಫಿಲಿಪೈನ್ಸ್‌ನಲ್ಲಿ ಭಾರೀ ಭೂಕಂಪ; 31 ಮಂದಿ ಸಾವು



(ನ್ಯೂಸ್ಕಡಬ) newskadaba.com,  ಅ.01 ಫಿಲಿಪೈನ್ಸ್‌: ಮಂಗಳವಾರ ತಡರಾತ್ರಿ ಮಧ್ಯ ಫಿಲಿಪೈನ್ಸ್‌ನಲ್ಲಿ ಸಂಭವಿಸಿದ 6.9 ತೀವ್ರತೆಯ ಭೂಕಂಪದಲ್ಲಿ ಕನಿಷ್ಠ 31 ಜನರು ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ. ಅಮೆರಿಕದ ಭೂವೈಜ್ಞಾನಿಕ ಸಮೀಕ್ಷೆ (ಯುಎಸ್‌ಜಿಎಸ್) ವರದಿಯ ಪ್ರಕಾರ, ಫಿಲಿಪೈನ್ಸ್‌ನ ಪಲೊಂಪನ್‌ನ ಪಶ್ಚಿಮಕ್ಕೆ ಮತ್ತು ಸೆಬು ಪ್ರಾಂತ್ಯದ ಬೊಗೊ ನಗರದ ಹತ್ತಿರ ರಾತ್ರಿ 10 ಗಂಟೆ ಸುಮಾರಿಗೆ ಭೂಕಂಪ ಸಂಭವಿಸಿದೆ.





ಫಿಲಿಪೈನ್ಸ್ ರೆಡ್‌ಕ್ರಾಸ್‌ನ ಅಧ್ಯಕ್ಷ ರಿಚರ್ಡ್ ಗಾರ್ಡನ್ ಮಾಹಿತಿ ನೀಡಿದ್ದು, ಭಾರೀ ಭೂಕಂಪಕ್ಕೆ ಸ್ಯಾನ್ ರೆಮಿಜಿಯೊ ಪಟ್ಟಣದಲ್ಲಿ ಬ್ಯಾಸ್ಕೆಟ್‌ಬಾಲ್ ಆಟದ ವೇಳೆಯಲ್ಲಿ ಕ್ರೀಡಾ ಸಂಕೀರ್ಣ ಕುಸಿದು ಬಿದ್ದಿದೆ. ಪರಿಣಾಮವಾಗಿ ಫಿಲಿಪೈನ್ಸ್ ಕೋಸ್ಟ್ ಗಾರ್ಡ್‌ನ 3 ಮಂದಿ ಸದಸ್ಯರು ಮತ್ತು ಒಬ್ಬ ಅಗ್ನಿಶಾಮಕ ಸಿಬ್ಬಂದಿ ಸೇರಿದಂತೆ ಕನಿಷ್ಠ 31 ಜನರು ಸಾವನ್ನಪ್ಪಿದ್ದಾರೆ.






ಕೆಲವು ಚರ್ಚ್‌ಗಳು, ಶಾಲೆಗಳು ಕುಸಿದು ಬಿದ್ದಿವೆ. ಜನರನ್ನು ಸುರಕ್ಷಿತ ಜಾಗಕ್ಕೆ ಸ್ಥಳಾಂತರಿಸಲಾಗಿದೆ ಎಂದು ಅವರು ಹೇಳಿದರು. ಇನ್ನು ಘಟನೆಗೆ ಸಂಬಂಧಿಸಿದ ವಿಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್‌ ಆಗುತ್ತಿವೆ. ಭೂಕಂಪದಿಂದಾಗಿ ಮಾಲ್‌ನಲ್ಲಿ ಬೆಂಕಿ ಕಾಣಿಸಿಕೊಂಡಿರುವುದನ್ನೂ ವಿಡಿಯೊದಲ್ಲಿ ಕಾಣಬಹುದಾಗಿದೆ.

error: Content is protected !!
Scroll to Top