ಉಳ್ಳಾಲ: ಹವಾಮಾನ ವೈಪರೀತ್ಯ ► ಕಡಲಿನ ಅಬ್ಬರಕ್ಕೆ ಹಲವು ಮನೆಗಳಿಗೆ ಹಾನಿ

(ನ್ಯೂಸ್ ಕಡಬ) newskadaba.com ಮಂಗಳೂರು, ಎ.23. ಹವಾಮಾನ ವೈಪರೀತ್ಯದಿಂದಾಗಿ ಉಳ್ಳಾಲ, ಸೋಮೇಶ್ವರ, ಉಚ್ಚಿಲ ಪ್ರದೇಶಗಳಲ್ಲಿ ಕಡಲಿನ ಅಬ್ಬರ ತೀವ್ರಗೊಂಡ ಪರಿಣಾಮ ಕೆಲವು ಮನೆಗಳಿಗೆ ಹಾನಿಯಾಗಿವೆ.

ಶನಿವಾರ ರಾತ್ರಿಯಿಂದಲೇ ಸೋಮೇಶ್ವರ, ಉಚ್ಚಿಲ ಭಾಗದಲ್ಲಿ ಕಡಲ್ಕೊರೆತದ ತೀವ್ರತೆ ವಿಪರೀತವಾಗಿತ್ತು. ಸೋಮೇಶ್ವರ, ಉಚ್ಚಿಲದಲ್ಲಿ ನಾಲ್ಕು ಮನೆಗಳಿಗೆ ಹಾನಿಯಾಗಿದ್ದು, ಹಲವು ಮನೆಗಳಿಗೆ ನೀರು ನುಗ್ಗಿವೆ. ರವಿವಾರ ಮಧ್ಯಾಹ್ನದಿಂದ ಉಳ್ಳಾಲ ಸೋಮೇಶ್ವರ ಪ್ರದೇಶದಲ್ಲಿ ಕಡಲು ಪ್ರಕ್ಷುಬ್ದಗೊಂಡಿದ್ದು, ಬೃಹತ್ ಗಾತ್ರದ ಅಲೆಗಳು ದಡಕ್ಕೆ ಅಪ್ಪಳಿಸುತ್ತಿವೆ. ಪ್ರತಿ ವರ್ಷ ಮಳೆಗಾಲ ಆರಂಭದ ಬಳಿಕವಷ್ಟೇ ಕಡಲ್ಕೊರೆತದ ಸಮಸ್ಯೆ ಎದುರಾಗುತ್ತಿತ್ತು, ಆದರೆ ಈ ಬಾರಿ ಮಳೆಗಾಲಕ್ಕಿಂತ ಮುನ್ನವೇ ಕಡಲಿನಬ್ಬರ ಹೆಚ್ಚಾಗಿರುವುದು ಕಡಲ ತೀರದ ಜನರನ್ನು ಆತಂಕಕ್ಕೀಡುಮಾಡಿದೆ.

Also Read  ಕಸಾಪ ಚುನಾವಣೆ ಸೂಕ್ತ ಅಭ್ಯರ್ಥಿಯ ಆಯ್ಕೆಯಾಗಲಿ ➤ ಖಿದ್ಮಾ ಸಂಚಾಲಕ ಆಮಿರ್ ಬನ್ನೂರು ಅಭಿಪ್ರಾಯ

error: Content is protected !!
Scroll to Top