ಉಡುಪಿ ಜಿಲ್ಲೆಯಲ್ಲಿ 70,971 ಮನೆಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪೂರ್ಣ



(ನ್ಯೂಸ್ಕಡಬ) newskadaba.com,  ಅ.01 ಉಡುಪಿ: ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ 2025-26ನೇ ಸಾಲಿನಲ್ಲಿ ಉಡುಪಿ ಜಿಲ್ಲಾದ್ಯಾಂತ ವಿದ್ಯುತ್ ಸಂಪರ್ಕ ಪಡೆದ ಒಟ್ಟು ಸುಮಾರು 3.55 ಲಕ್ಷ ಮನೆಗಳಿಗೂ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಬಗ್ಗೆ ಸಮೀಕ್ಷೆ ಮಾಡುವ ಸಂಬಂಧ ಈಗಾಗಲೇ ಮೆಸ್ಕಾಂ ಇಲಾಖೆ ವತಿಯಿಂದ ಆರ್.ಆರ್.ನಂಬರ್ ಹೊಂದಿರುವ ಮನೆಗಳಿಗೆ ಜಿಯೋ ಟ್ಯಾಗ್ ಸ್ಟಿಕರ್ ಅಳವಡಿಸಲಾಗಿರುತ್ತದೆ.





ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2025 ರ ಮನೆ ಮನೆ ಸಮೀಕ್ಷೆಯನ್ನು ಸೆ.22 ರಿಂದ ಅ.07 ರವೆರಗೆ ಕರ್ನಾಟಕ ರಾಜ್ಯದ ನಾಗರೀಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಬಗ್ಗೆ ಸಮೀಕ್ಷಾ ಕಾರ್ಯ ಕೈಗೊಂಡಿದ್ದು, ಗಣತಿದಾರರು ಜಿಲ್ಲೆಯ ನಾಗರೀಕ ಮನೆಗಳಿಗೆ ಭೇಟಿ ನೀಡಿದ ಸಮಯದಲ್ಲಿ ಕುಟುಂಬದ ಪಡಿತರ ಚೀಟಿ, ಆಧಾರ್ ಸಂಖ್ಯೆ, ವಿಶೇಷ ಚೇತನರು ಕುಟುಂಬದಲ್ಲಿದ್ದರೆ ಯು.ಡಿ.ಐ.ಡಿ ಸಂಖ್ಯೆಯನ್ನು ಗಣತಿದಾರರಿಗೆ ನೀಡಬೇಕಾಗಿರುತ್ತದೆ. ಪ್ರತಿ ಕುಟುಂಬದ ಸದಸ್ಯರ ಆಧಾರ್ ಕಾರ್ಡ್ಗಳು ಮೊಬೈಲ್ ನಂಬರ್ಗಳಿಗೆ ಲಿಂಕ್ ಆಗಿರುವುದನ್ನು ಖಚಿತಪಡಿಸಿಕೊಳ್ಳುವುದು ಅಗತ್ಯವಾಗಿರುತ್ತದೆ ಹಾಗೂ ಸಮೀಕ್ಷೆ ವೇಳೆ E-Kyc (Aadhar) ಪ್ರಕ್ರಿಯೆಗಾಗಿ ಒ.ಟಿ.ಪಿ. ಸಂಖ್ಯೆ ಆ ಸದಸ್ಯರ ಆಧಾರ್ ನಂಬರ್ಗೆ ಜೋಡಣೆ ಆಗಿರುವ ಮೊಬೈಲ್ ಸಂಖ್ಯೆಗೆ ಬರುತ್ತದೆ. ಒಂದು ವೇಳೆ ಆ ಸದಸ್ಯರು ಮನೆಯಲ್ಲಿಲ್ಲದಿದ್ದರೆ ಕುಟುಂಬದ ಪರವಾಗಿ ಉತ್ತರ ನೀಡುತ್ತಿರುವ ಸದಸ್ಯರ ಫೋನ್ ಮೂಲಕ ಒ.ಟಿ.ಪಿ. ಸಂಖ್ಯೆಯನ್ನು ನೀಡಬೇಕು.






ರಾಜ್ಯ ಸರ್ಕಾರವು ಹಿಂದುಳಿದ ವರ್ಗಗಳ ಆಯೋಗದ ಮೂಲಕ ಸೆಪ್ಟಂಬರ್ 22 ರಿಂದ ಜಿಲ್ಲೆಯಾದ್ಯಂತ ಕೈಗೊಂಡಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಸಮೀಕ್ಷಾ ಕಾರ್ಯವನ್ನು ಕೈಗೊಳ್ಳಲು ಯಡಮೊಗೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಿಯೋಜನೆಗೊಂಡಿದ್ದ ಮಲ್ಲೇಶ್ ರವರು ತಮಗೆ ವಹಿಸಿದ್ದ ಸಮೀಕ್ಷಾ ಕರ್ತವ್ಯವನ್ನು ಕೇವಲ ಮೂರು ದಿನಗಳ ಒಳಗಾಗಿ ಪೂರ್ಣಗೊಳಿಸಿದ್ದು, ಅವರಿಗೆ ಜಿಲ್ಲಾಧಿಕಾರಿಗಳಾದ ಸ್ವರೂಪ ಟಿ.ಕೆ ಅವರು ಅಭಿನಂದನೆ ಸಲ್ಲಿಸಿದ್ದಾರೆ.

error: Content is protected !!
Scroll to Top