ಮೈಸೂರು: ‘ದಸರಾ ಉತ್ಸವ ರಾಜಕೀಯದ ವಿಷಯವಲ್ಲ’- ಸಿಎಂ ಸಿದ್ದರಾಮಯ್ಯ



(ನ್ಯೂಸ್ಕಡಬ) newskadaba.com,  ಅ.02 ಮೈಸೂರು: ಸಂವಿಧಾನದ ಬಗ್ಗೆ ಅರಿವಿಲ್ಲದವರೇ ದಸರಾ ಉದ್ಘಾಟಿಸುವವರ ಬಗ್ಗೆ ವಿರೋಧವನ್ನು ವ್ಯಕ್ತಪಡಿಸಿದವರಿಗೆ ಸುಪ್ರೀಂ ಕೋರ್ಟ್ ನಲ್ಲಿಯೂ ಛೀಮಾರಿ ಹಾಕಲಾಯಿತು. ದಸರಾ ಉತ್ಸವ ರಾಜಕೀಯದ ವಿಷಯವಲ್ಲ ಎಂದು ಸಿದ್ದರಾಮಯ್ಯ ತಿಳಿಸಿದರು.





ಇಂದು ಮೈಸೂರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಮೈಸೂರು ದಸರಾಕ್ಕೆ ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಆಗಮಿಸಲಿದ್ದಾರೆ. ದಸರಾದಲ್ಲಿ ಏರ್ ಶೋ, ದೀಪಾಲಂಕಾರ, ಡ್ರೋನ್ ಶೋ ಸೇರಿದಂತೆ ವಿವಿಧ ಕಾರ್ಯಕ್ರಮಗಳು ಜನಪ್ರಿಯವಾಗಿದೆ. ಜನರು ಸಂತಸದಿಂದ ಪಾಲ್ಗೊಳ್ಳುವುದೇ ದಸರಾ ಉತ್ಸವ. ಚಾಮುಂಡೇಶ್ವರಿ ಅಭಿವೃದ್ಧಿ ಪ್ರಾಧಿಕಾರ, ವಸ್ತು ಪ್ರದರ್ಶನ ಪ್ರಾಧಿಕಾರ ಈಗಾಗಲೇ ಅಸ್ತಿತ್ವದಲ್ಲಿರುವುದರಿಂದ ದಸರಾ ಪ್ರಾಧಿಕಾರದ ಅವಶ್ಯಕತೆ ಇಲ್ಲ ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ” ಎಂದರು.






ಕರ್ನಾಟಕ ಜಾತ್ಯಾತೀತ ರಾಜ್ಯ
“ದಸರಾ ಉದ್ಘಾಟಕರ ಬಗ್ಗೆ ಬಿಜೆಪಿಯವರು ವಿರೋಧದ ಧ್ವನಿಯೆತ್ತಿದ್ದರು. ಕರ್ನಾಟಕ ಜಾತ್ಯಾತೀತ ರಾಜ್ಯವಾಗಿದ್ದು, ಸಂವಿಧಾನದ ಬಗ್ಗೆ ಅರಿವಿಲ್ಲದವರೇ ಇಂತಹ ವಿರೋಧವನ್ನು ವ್ಯಕ್ತಪಡಿಸುತ್ತಾರೆ.

error: Content is protected !!
Scroll to Top