ಮುಂಬೈ: ಇಂದಿನಿಂದ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಣ ಟೆಸ್ಟ್ ಸರಣಿ ಆರಂಭ



(ನ್ಯೂಸ್ಕಡಬ) newskadaba.com,  ಅ.02 ಮುಂಬೈ: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಣ ಟೆಸ್ಟ್ ಸರಣಿ ಇಂದಿನಿಂದ ಶುರುವಾಗಲಿದೆ. ಅಹಮದಾಬಾದ್​ನ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಬಲಿಷ್ಠ ಪ್ಲೇಯಿಂಗ್ ಇಲೆವೆನ್ ರೂಪಿಸಲಿದೆ.





ಅದರಂತೆ ಟೀಮ್ ಇಂಡಿಯಾ ಪರ ಆರಂಭಿಕರಾಗಿ ಯಶಸ್ವಿ ಜೈಸ್ವಾಲ್ ಹಾಗೂ ಕೆಎಲ್ ರಾಹುಲ್ ಕಣಕ್ಕಿಳಿಯಲಿದ್ದಾರೆ. ಇನ್ನು ಮೂರನೇ ಕ್ರಮಾಂಕದಲ್ಲಿ ಸಾಯಿ ಸುದರ್ಶನ್ ಬ್ಯಾಟ್ ಬೀಸಲಿದ್ದಾರೆ. ಹಾಗೆಯೇ ನಾಲ್ಕನೇ ಕ್ರಮಾಂಕದಲ್ಲಿ ನಾಯಕ ಶುಭ್​ಮನ್ ಗಿಲ್ ಕಣಕ್ಕಿಳಿಯಲಿದ್ದಾರೆ.ಐದನೇ ಕ್ರಮಾಂಕದಲ್ಲಿ ಈ ಬಾರಿ ದೇವದತ್ ಪಡಿಕ್ಕಲ್ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ. ಏಕೆಂದರೆ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಐದನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ್ದ ಕರುಣ್ ನಾಯರ್ ಈ ಬಾರಿ ತಂಡದಲ್ಲಿ ಸ್ಥಾನ ಪಡೆದಿಲ್ಲ. ಹೀಗಾಗಿ ಈ ಕ್ರಮಾಂಕದಲ್ಲಿ ಪಡಿಕ್ಕಲ್ ಕಾಣಿಸಿಕೊಳ್ಳುವುದು ಬಹುತೇಕ ಖಚಿತ ಎನ್ನಬಹುದು.






ರಿಷಭ್ ಪಂತ್ ಅನುಪಸ್ಥಿತಿಯಲ್ಲಿ ವಿಕೆಟ್ ಕೀಪರ್ ಬ್ಯಾಟರ್ ಆಗಿ ಧ್ರುವ್ ಜುರೆಲ್ ಕಣಕ್ಕಿಳಿಯಲಿದ್ದಾರೆ. ಆಲ್​ರೌಂಡರ್​ಗಳಾಗಿ ರವೀಂದ್ರ ಜಡೇಜಾ ಹಾಗೂ ಅಕ್ಷರ್ ಪಟೇಲ್​ಗೆ ಸ್ಥಾನ ಸಿಗುವ ಸಾಧ್ಯತೆ ಹೆಚ್ಚಿದೆ. ಅಲ್ಲದೆ ಪರಿಪೂರ್ಣ ಸ್ಪಿನ್ನರ್ ಆಗಿ ಕುಲ್ದೀಪ್ ಯಾದವ್ ಕಣಕ್ಕಿಳಿಯಲಿದ್ದಾರೆ. ವೇಗಿಗಳಾಗಿ ಈ ಬಾರಿ ಜಸ್​ಪ್ರೀತ್ ಬುಮ್ರಾ ಹಾಗೂ ಮೊಹಮ್ಮದ್ ಸಿರಾಜ್ ಮಾತ್ರ ಕಾಣಿಸಿಕೊಳ್ಳಬಹುದು. ಏಕೆಂದರೆ ಅಹಮದಾಬಾದ್ ಪಿಚ್ ಸ್ಪಿನ್ ಬೌಲರ್​ಗಳಿಗೆ ಸಹಕಾರಿ.

 

error: Content is protected !!
Scroll to Top