ತಾಯಿ-ಮಗಳ ನಡುವೆ ಜಗಳ; ಮಗಳನ್ನು ಕತ್ತು ಹಿಸುಕಿ ಕೊಲೆ ಮಾಡಿದ ತಾಯಿಯ ಬಂಧನ



(ನ್ಯೂಸ್ಕಡಬ) newskadaba.com,  ಅ.04 ಕಾರ್ಕಳ: ತಾಯಿ-ಮಗಳ ನಡುವೆ ಜಗಳ ತೀವ್ರಗೊಂಡು ತಾಯಿಯೇ ತನ್ನ ಮಗಳನ್ನು ಕತ್ತು ಹಿಸುಕಿ ಕೊಲೆ ಮಾಡಿರುವ ಆಘಾತಕಾರಿ ಘಟನೆ ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದಲ್ಲಿ ನಡೆದಿದೆ.ಮೃತ ಯುವತಿಯನ್ನು ಕಾರ್ಕಳದ ಹಿರ್ಗಾನ ಗ್ರಾಮದ ನಿವಾಸಿಗಳಾದ ಶೇಖ್ ಮುಸ್ತಫಾ ಮತ್ತು ಗುಲ್ಜಾರ್ ಬಾನು ಅವರ ಪುತ್ರಿ ಶಿಫನಾಜ್ ಎಂದು ಗುರುತಿಸಲಾಗಿದೆ.





ಪೊಲೀಸ್ ಮೂಲಗಳ ಪ್ರಕಾರ, ಶಿಫನಾಜ್ ತಾನು ಪ್ರೀತಿಸುತ್ತಿದ್ದ ಯುವಕನನ್ನು ಭೇಟಿಯಾಗಲು ಉಡುಪಿಗೆ ಹೋಗುವುದಾಗಿ ಹೇಳಿಕೊಂಡಿದ್ದಳು. ಇದಕ್ಕೆ ಆಕೆಯ ತಾಯಿ ಗುಲ್ಜಾರ್ ಬಾನು ವಿರೋಧ ವ್ಯಕ್ತಪಡಿಸಿದ್ದು, ಆವೇಶದಲ್ಲಿ ಮಗಳ ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.ಮೊದಲಿಗೆ, ಈ ಸಾವಿನ ಬಗ್ಗೆ ಅನುಮಾನ ವ್ಯಕ್ತವಾಗಿದ್ದು, ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಎಂದು ಪ್ರಕರಣ ದಾಖಲಿಸಲಾಗಿತ್ತು.






ವರದಿಯ ಆಧಾರದ ಮೇಲೆ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡು ಆರೋಪಿ ತಾಯಿ ಗುಲ್ಜಾರ್ ಬಾನು (45) ಅವರನ್ನು ಬಂಧಿಸಿದ್ದಾರೆ. ಬಂಧನದ ನಂತರ ಆಕೆಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ.ಪ್ರಕರಣದ ಕುರಿತು ಕಾರ್ಕಳ ನಗರ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

 

 

 

error: Content is protected !!
Scroll to Top