ಮಡಿಕೇರಿ ವಸತಿ ಶಾಲೆಯೊಂದರಲ್ಲಿ ಬೆಂಕಿ ಅನಾಹುತ ; 2ನೇ ತರಗತಿ ವಿದ್ಯಾರ್ಥಿ ಸಜೀವ ದಹನ



(ನ್ಯೂಸ್ಕಡಬ) newskadaba.com,  .09 ಮಡಿಕೇರಿ : ಮಡಿಕೇರಿಯ ವಸತಿ ಶಾಲೆಯೊಂದರಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, 2ನೇ ತರಗತಿ ವಿದ್ಯಾರ್ಥಿ ಮೃತಪಟ್ಟಿರುವ ಘಟನೆ ನಡೆದಿದೆ. ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಕಾಟಗೇರಿ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ವಸತಿ ಶಾಲೆಯ ಎರಡನೇ ತರಗತಿ ವಿದ್ಯಾರ್ಥಿ ಪುಷ್ಪಕ್ ಮೃತಪಟ್ಟಿದ್ದಾನೆ.





ಶಾರ್ಟ್ ಸರ್ಕ್ಯೂಟ್‌ನಿಂದ ಈ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ವಸತಿ ಶಾಲೆಯ ಸುರಕ್ಷತಾ ಅಂಶಗಳನ್ನು ಪರಿಶೀಲಿಸಲಾಗುತ್ತಿದೆ.






error: Content is protected !!
Scroll to Top