ಹಿರಿಯ ಪತ್ರಕರ್ತ, ವಿಶ್ವವಾಣಿ ಅಂಕಣಕಾರ ಎಂಜೆ ಅಕ್ಬರ್‌ ನೂತನ ಕೃತಿ ಬಿಡುಗಡೆ

(ನ್ಯೂಸ್‌ ಕಡಬ) newskadaba.com,  ಅ.11 ನವದೆಹಲಿ: ಖ್ಯಾತ ಪತ್ರಕರ್ತ, ಕೇಂದ್ರದ ಮಾಜಿ ಸಚಿವ ಹಾಗೂ ವಿಶ್ವವಾಣಿ ಅಂಕಣಕಾರ ಎಂ ಜೆ ಅಕ್ಬರ್ ಅವರು ಬರೆದ ʼಆಫ್ಟರ್‌ ಮಿ, ಕೆಯೋಸ್‌: ಆಸ್ಟ್ರಾಲಜಿ ಇನ್‌ ದಿ ಮೊಗಲ್‌ ಎಂಪೈರ್‌ʼ ಪುಸ್ತಕ ಬಿಡುಗಡೆ ಸಮಾರಂಭ ಇತ್ತೀಚೆಗೆ ದಿಲ್ಲಿಯ ಐಟಿಸಿ ಮೌರ್ಯ ಹೋಟೆಲ್‌ನಲ್ಲಿ ನಡೆಯಿತು

ಕನ್ನಡದ ಹಿರಿಯ ಪತ್ರಕರ್ತ, ವಿಶ್ವವಾಣಿ ಪ್ರಧಾನ ಸಂಪಾದಕ ವಿಶ್ವೇಶ್ವರ ಭಟ್‌ ಮತ್ತಿತರ ಗಣ್ಯರು ಸಮಾರಂಭದಲ್ಲಿ ಭಾಗವಹಿಸಿದ್ದರು. ಈ ಕುರಿತು ವಿಶ್ವೇಶ್ವರ ಭಟ್‌ ಅವರು ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ವಿವರ ನೀಡಿದ್ದಾರೆ:

ʼಅದೊಂದು “ಹೈಪ್ರೊಫೈಲ್” ಪುಸ್ತಕ ಬಿಡುಗಡೆ ಸಮಾರಂಭ. ರಕ್ಷಣಾ ಸಚಿವ ರಾಜನಾಥ ಸಿಂಗ್, ಕಮ್ಯೂನಿಕೇಶನ್ ಖಾತೆ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ಬಿಹಾರ ರಾಜ್ಯಪಾಲ ಆರೀಫ್ ಮೊಹಮದ್ ಖಾನ್, ಪ್ರಧಾನ ಮಂತ್ರಿ ವಸ್ತು ಸಂಗ್ರಹಾಲಯದ ಅಧ್ಯಕ್ಷ ನೃಪೇಂದ್ರ ಮಿಶ್ರಾ ವೇದಿಕೆಯಲ್ಲಿದ್ದರು. ಜತೆಯಲ್ಲಿ ಸಮಾರಂಭದ ಕೇಂದ್ರ ಬಿಂದು ಎಂ.ಜೆ.ಅಕ್ಬರ್.

Scroll to Top