(ನ್ಯೂಸ್ ಕಡಬ) newskadaba.com, ಅ .13: ಮುಂದಿನ ಮೂರು ದಿನಗಳ ಕಾಲ ಬೆಂಗಳೂರು ಸೇರಿ ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಇನ್ನು ಸೋಮವಾರ (ಅ.13ರಂದು) ಕರಾವಳಿ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ.
ದಕ್ಷಿಣ ಒಳನಾಡಿನ ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು, ತುಮಕೂರು, ರಾಮನಗರ, ಚಾಮರಾಜನಗರ, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.









