(ನ್ಯೂಸ್ ಕಡಬ) newskadaba.com ಅ. 14. ಮಧ್ಯಪ್ರದೇಶ, ರಾಜಸ್ಥಾನದಲ್ಲಿ ಮಕ್ಕಳ ಸಾವಿಗೆ ಕಾರಣವಾದ ಕೋಲ್ಡ್ರಿಫ್ ಕೆಮ್ಮಿನ ಸಿರಪ್ ತಯಾರಕ ಕಂಪನಿಯಾದ ಸ್ರೇಸನ್ ಫಾರ್ಮಾಸ್ಯುಟಿಕಲ್ ನ ಉತ್ಪಾದನಾ ಪರವಾನಗಿಯನ್ನು ತಮಿಳುನಾಡು ಔಷಧ ನಿಯಂತ್ರಣ ಇಲಾಖೆ ಸೋಮವಾರದಂದು ರದ್ದುಗೊಳಿಸಿದ್ದಲ್ಲದೇ ಕಂಪನಿಯನ್ನು ಮುಚ್ಚುವಂತೆ ಆದೇಶಿಸಿರುವ ಕುರಿತು ವರದಿಯಾಗಿದೆ.
ಈ ಔಷಧದಲ್ಲಿ ವಿಷಕಾರಿ ದ್ರಾವಣವಾದ ಡೈಎಥಿಲೀನ್ ಗ್ಲೈಕೋಲ್ 48.6% ಇರುವುದು ಪತ್ತೆಯಾಗಿದೆ. ಈ ಔಷಧವು ಮಧ್ಯಪ್ರದೇಶದಲ್ಲಿ ಮಕ್ಕಳ ಸಾವಿಗೆ ಕಾರಣವಾಗಿದೆ ಎಂದು ವರದಿಯಾಗಿದೆ.
ವಿಷಕಾರಿ ದ್ರಾವಣವಾದ ಡೈಎಥಿಲೀನ್ ಗ್ಲೈಕೋಲ್ ಇರುವ ಸ್ರೇಸನ್ ಕಂಪನಿಯನ್ನು ಅಧಿಕೃತವಾಗಿ ಮುಚ್ಚಲಾಗಿದೆ ಎಂದು ತಮಿಳುನಾಡು ಆರೋಗ್ಯ ಇಲಾಖೆ ತಿಳಿಸಿದೆ. ಅಲ್ಲದೇ ತಮಿಳುನಾಡಿನ ಎಲ್ಲಾ ಔಷಧ ಉತ್ಪಾದನಾ ಘಟಕಗಳಲ್ಲಿ ಸಮಗ್ರ ತಪಾಸಣೆಗೆ ಇಲಾಖೆ ಆದೇಶಿಸಿದೆ.









