ಅ.15ರಿಂದ ಎರಡು ದಿನ ಕಲ್ಯಾಣ ಕರ್ನಾಟಕಕ್ಕೆ ನಿರ್ಮಲಾ ಸೀತಾರಾಮನ್ ಪ್ರವಾಸ



(ನ್ಯೂಸ್ಕಡಬ) newskadaba.com ಅ. 14. ನಾಳೆಯಿಂದ 2  ದಿನಗಳ ಕಾಲ ಕಲ್ಯಾಣ ಕರ್ನಾಟಕ ಜಿಲ್ಲೆಗಳಿಗೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು  ಪ್ರವಾಸ ಕೈಗೊಳ್ಳಲಿದ್ದಾರೆ. ಕಲ್ಯಾಣ ಕರ್ನಾಟಕದ ಜಿಲ್ಲೆಗಳಾದ ಕಲಬುರಗಿ, ಬೀದರ್, ಕೊಪ್ಪಳ, ಬಳ್ಳಾರಿ, ರಾಯಚೂರು ಹಾಗೂ ಯಾದಗಿರಿಯಲ್ಲಿ ನಡೆಯಲಿರುವ ವಿವಿಧ ಕಾರ್ಯಕ್ರಮಗಳಲ್ಲಿ ನಿರ್ಮಲಾ ಸೀತಾರಾಮನ್ ಭಾಗಿಯಾಗಲಿದ್ದಾರೆ.







ಈ ಸಮಯದಲ್ಲಿ ರೈತ ಪ್ರಮುಖರು, ರೈತ ಕೇಂದ್ರಗಳು, ಕೃಷಿ ತರಬೇತಿ ಕೇಂದ್ರಗಳು, ಕೃಷಿ ಉತ್ಪನ್ನಗಳ ಸಂಸ್ಕರಣಾ ಕೇಂದ್ರಗಳಿಗೆ ಭೇಟಿ ನೀಡಿ ಸಂವಾದ ನಡೆಸಲಿದ್ದಾರೆ. ಕೇಂದ್ರಕ್ಕೆ ಎನ್‌ಡಿಆರ್‌ಎಫ್ ನೆರೆ ಪರಿಹಾರ ಕೋರಿ ರಾಜ್ಯದಿಂದ ಪತ್ರ ಬರೆಯಲು ಸಿದ್ಧತೆಯ ಬೆನ್ನಲ್ಲೇ ವಿತ್ತ ಸಚಿವೆ ರಾಜ್ಯ ಭೇಟಿ ಕೈಗೊಂಡಿದ್ದಾರೆ.






ಇನ್ನು ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ನಿರ್ಮಲಾ ಸೀತಾರಾಮನ್ ಅವರು. ನಾಳೆಯಿಂದ ಕಲ್ಯಾಣ ಕರ್ನಾಟಕ ಪ್ರದೇಶದ ಪ್ರವಾಸಕ್ಕೆ ಹೊರಡುತ್ತಿದ್ದೇನೆ. ಅಲ್ಲಿ ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ ಘಟಕಗಳನ್ನು ಸ್ಥಾಪಿಸಲಾಗಿದ್ದು, ಸದರಿ ರೈತರ ತರಬೇತಿ ಕೇಂದ್ರ ಮತ್ತು ಕಾಮನ್ ಫೆಸಿಲಿಟಿ ಸೆಂಟರ್‌ ಗಳನ್ನು ಭೇಟಿಯಾಗಿ ಅವುಗಳ ಉತ್ಪಾದನಾ ಚಟುವಟಿಕೆಗಳನ್ನು ವೀಕ್ಷಿಸಲಿದ್ದೇನೆ ಎಂದು ಬರೆದುಕೊಂಡಿದ್ದಾರೆ.

error: Content is protected !!
Scroll to Top