ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ಬೀದಿಬದಿ ವ್ಯಾಪಾರಕ್ಕೆ ಅವಕಾಶ ಕೊಡುವಂತೆ ಶಾಸಕ ಅಶೋಕ್ ರೈಗೆ ಮನವಿ



(ನ್ಯೂಸ್‌ ಕಡಬ) newskadaba.com  ಅ. 14. ಕುಕ್ಕೇಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ಕಳೆದ 10 ವರ್ಷಗಳಿಂದ ಬೀದಿ ಬದಿ ವ್ಯಾಪಾರ ಮಾಡುತ್ತಿದ್ದ ನಮ್ಮನ್ನು ಕಳೆದ ಒಂದು ವರ್ಷದಿಂದ ವ್ಯಾಪಾರ ಮಾಡದಂತೆ ತಡೆಯಲಾಗಿದ್ದು, ಮರಳಿ ಅವಕಾಶ ನೀಡುವಂತೆ ವ್ಯಾಪಾರಿಗಳು ಶಾಸಕ ಅಶೋಕ್ ರೈ ಅವರಿಗೆ ಮನವಿ ಸಲ್ಲಿಸಿದ್ದಾರೆ.





ಕಳೆದ 10 ವರ್ಷಗಳಿಂದ ವ್ಯಾಪಾರ ಮಾಡುತ್ತಿದ್ದ ನಮ್ಮನ್ನು ಏಕಾಏಕಿ ಎಬ್ಬಿಸಿದ್ದಾರೆ. ಇದರಿಂದ ನಮ್ಮ ಜೀವನಕ್ಕೆ ತೊಂದರೆಯಾಗಿದ್ದು, ವಿವಿಧ ಜನಪ್ರತಿನಿಧಿಗಳಿಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ವ್ಯಾಪಾರಿಗಳು ತಮ್ಮ ಅಳಲನ್ನು ತೋಡಿಕೊಂಡರು.






ಈ ಬಗ್ಗೆ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಜೊತೆ ಮಾತನಾಡಿದ ಶಾಸಕರು, ಬೀದಿ ಬದಿ ವ್ಯಾಪಾರಿಗಳಿಗೆ ವ್ಯಾಪಾರ ಮಾಡಲು ಅವಕಾಶ ಕೊಡಿ. ಬೆಂಗಳೂರಿನಂತ ಮಹಾನಗರಗಳಲ್ಲೂ ಬೀದಿ ವ್ಯಾಪಾರಿಗಳಿಗೆ ಅವಕಾಶ ನೀಡಲಾಗಿದೆ. ಜನರಿಗೆ ತೊಂದರೆಯಾಗದ ಸ್ಥಳಗಳಲ್ಲಿ ಮತ್ತೆ ವ್ಯಾಪಾರಕ್ಕೆ ಅವಕಾಶ ಕೊಡಬೇಕು ಎಂದು ಶಾಸಕರು ಸೂಚಿಸಿದರು.

error: Content is protected !!
Scroll to Top