ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್; ತುಟ್ಟಿಭತ್ಯೆ ಶೇ.2 ಹೆಚ್ಚಳ



(ನ್ಯೂಸ್ಕಡಬ) newskadaba.com  . 14. ರಾಜ್ಯ ಸರ್ಕಾರಿ ನೌಕರರಿಗೆ ಕರ್ನಾಟಕ ಸರ್ಕಾರ ಗುಡ್‌ ನ್ಯೂಸ್ ನೀಡಿದೆ. ಸರ್ಕಾರಿ ನೌಕರರಿಗೆ 01-07-2025ರಿಂದ ಅನ್ವಯವಾಗುವಂತೆ ಶೇ.2 ತುಟ್ಟಿಭತ್ಯೆಯನ್ನು ಹೆಚ್ಚಿಸುವ ಕಡತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನುಮೋದನೆ ನೀಡಿದ್ದಾರೆ. ಮುಂದಿನ 2 ರಿಂದ 3 ದಿನಗಳಲ್ಲಿ ಅಧಿಕೃತ ಆದೇಶ ಹೊರಬೀಳಲಿದೆ. ಈ ಬಗ್ಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಮಾಹಿತಿ ನೀಡಿದ್ದಾರೆ.







ರಾಜ್ಯ ಸರ್ಕಾರಿ ನೌಕರರಿಗೆ ಜುಲೈ 1ರಿಂದ ಅನ್ವಯವಾಗುವಂತೆ ಬಾಕಿ ಇರುವ ತುಟ್ಟಿಭತ್ಯೆಯನ್ನು ರಾಜ್ಯ ಸರ್ಕಾರವು ನಗದು ರೂಪದಲ್ಲಿ ಬಿಡುಗಡೆ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರು ಮನವಿ ಮಾಡಿದ್ದರು.






error: Content is protected !!
Scroll to Top