(ನ್ಯೂಸ್ ಕಡಬ) newskadaba.com, ಅ.15 ವಾಷಿಂಗ್ಟನ್ : ಅಮೆರಿಕದಲ್ಲಿ ಭಾರತ ಮೂಲದ ಖ್ಯಾತ ರಕ್ಷಣಾ ತಜ್ಞ ಆಶ್ಲೇಟೆಲ್ಲಿಸ್ (64) ಅವರನ್ನು ಕಾನೂನುಬಾಹಿರವಾಗಿ ಚೀನಾ ಪರ ಬೇಹುಗಾರಿಕೆ ನಡೆಸಿದ ಆರೋಪದ ಮೇಲೆ ಅಮೆರಿಕದಲ್ಲಿ ಬಂಧಿಸಲಾಗಿದೆ.
ಟೆಲ್ಲಿಸ್ ಅವರು ತಮ್ಮ ವಿಯೆನ್ನಾ, ವರ್ಜೀನಿಯಾದ ಮನೆಯಲ್ಲಿ ವಾಯುಪಡೆಯ ತಂತ್ರಗಳು ಮತ್ತು ವಿಧಾನಗಳಿಗೆ ಸಂಬಂಧಿಸಿದ ಸಾವಿರಕ್ಕೂ ಹೆಚ್ಚು ರಹಸ್ಯ ದಾಖಲೆಗಳನ್ನು ಗುಪ್ತವಾಗಿ ಇರಿಸಿಕೊಂಡಿದ್ದರು ಎಂದು ಅಮೆರಿಕದ ಫೆಡರಲ್ ಪ್ರಾಸಿಕ್ಯೂಟರ್ ತನಿಖೆಯಲ್ಲಿ ಕಂಡುಕೊಂಡಿದೆ. ಶನಿವಾರದಂದು ಅವರನ್ನು ತನಿಖೆಗೆ ಒಳಪಡಿಸಲಾಗಿತ್ತು. ಸೋಮವಾರದಂದು ಅಮೆರಿಕ ಕೋರ್ಟ್ಗೆ ದೋಷಾರೋಪಣೆ ಪಟ್ಟಿ ಸಲ್ಲಿಸಲಾಗಿತ್ತು.
ಯಾವುದೇ ಕಾರಣಕ್ಕೂ ರಕ್ಷಣಾ ಸಂಬಂಧಿತ ದಾಖಲೆಗಳನ್ನು ತಮ್ಮಲ್ಲಿ ಅನಧಿಕೃತವಾಗಿ ಹೊಂದಿರುವುದು ಅಥವಾ ಉಳಿಸಿಕೊಳ್ಳುವುದನ್ನು ಅಮೆರಿಕದ ಕಾನೂನು ಒಪ್ಪಿಕೊಳ್ಳುವುದಿಲ್ಲ. ಟೆಲ್ಲಿಸ್ ಅವರು ಈ ಎಲ್ಲ ದಾಖಲೆಗಳನ್ನು ಸುರಕ್ಷಿತ ಸ್ಥಳಗಳಲ್ಲಿ ಸಂಗ್ರಹ ಮಾಡಿದ್ದರು ಎಂದು ಆರೋಪಿಸಲಾಗಿದೆ.
ಟೆಲ್ಲಿಸ್ ಅಮೆರಿಕ ಸೇನಾ ವಿಮಾನಗಳ ಸಾಮರ್ಥ್ಯಕ್ಕೆ ಸಂಬಂಧಿಸಿದ ಗೌಪ್ಯ ಕಡತಗಳನ್ನು ಈ ವರ್ಷದ ಸೆಪ್ಟೆಂಬರ್ ಮತ್ತು ಅಕ್ಟೋಬರ್ನಲ್ಲಿ ರಕ್ಷಣಾ ಮತ್ತು ವಿದೇಶಾಂಗ ಇಲಾಖೆಗಳ ಕಟ್ಟಡದಿಂದ ರಹಸ್ಯ ಮಾಹಿತಿ ಸಂಗ್ರಹಿಸಿದರು. ಇದಕ್ಕೆ ಸಾಕ್ಷಿಯಾಗಿ ಅವರು ಈ ಕಟ್ಟಡದಿಂದ ಹೊರಗೆ ಬರುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಸಿಸಿಟಿವಿಯ ದೃಶ್ಯಗಳ ಆಧಾರದ ಮೇರೆಗೆ ಅಧಿಕಾರಿಗಳು ಶನಿವಾರದಂದು ಟೆಲ್ಲಿಸ್ ನಿವಾಸದ ಮೇಲೆ ದಾಳಿ ನಡೆಸಿ, ಶೋಧಕಾರ್ಯ ನಡೆಸಿದ್ದರು, ಈ ವೇಳೆ ಅನೇಕ ದಾಖಲೆಗಳು ಅಧಿಕಾರಿಗಳಿಗೆ ದೊರೆತಿವೆ…










