(ನ್ಯೂಸ್ ಕಡಬ) newskadaba.com, ಅ.15 ಬೀದರ್: ಈ ಭದ್ರತೆಗಾಗಿ ಹೊಸ ಮಸೂದೆ ಜಾರಿಗೆ ತರಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ.ಜಿಲ್ಲಾ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಈ ವಿಚಾರವನ್ನು ತಿಳಿಸಿದರು.
ರಾಜ್ಯದ ದುಡಿಯುವ ಜನರಲ್ಲಿ ಶೇ.85ರಷ್ಟು ಅಸಂಘಟಿತ ವಲಯದ ಕಾರ್ಮಿಕರಾಗಿದ್ದಾರೆ. ವಿವಿಧ ವಲಯದಲ್ಲಿ ಕಾರ್ಯ ನಿರ್ವಹಿಸುವುದರ ಮೂಲಕ ರಾಜ್ಯಕ್ಕೆ ದೊಡ್ಡ ಶಕ್ತಿಯಾಗಿದ್ದಾರೆ. ರಾಜ್ಯದಲ್ಲಿ ಅಸಂಘಟಿತ ವಲಯದಲ್ಲಿ ದುಡಿಯುತ್ತಿರುವ ಕಾರ್ಮಿಕರಿಗೆ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಹೊಸ ಮಸೂದೆಯನ್ನು ತರಲು ರಾಜ್ಯ ಸರ್ಕಾರ ಮುಂದಾಗಿದೆ ಎಂಬುದನ್ನು ಹೇಳಿದರು.
ಸಂಪುಟ ವಿಸ್ತರಣೆಯ ಕುರಿತ ಪ್ರಶ್ನೆಗೆ ಉತ್ತರಿಸಿ, ಪ್ರತಿಯೊಬ್ಬರಿಗೂ ಸಚಿವ ಸ್ಥಾನ ಕೇಳುವ ಹಕ್ಕಿದೆ. ಆದರೆ, ಈ ಬಗ್ಗೆ ಪಕ್ಷದ ಹೈಕಮಾಂಡ್ ಅನ್ನು ಕೇಳುವ ಬದಲು ಮಾಧ್ಯಮಗಳ ಮುಂದೆ ಚರ್ಚಿಸುವುದು ಸಮಂಜಸವಲ್ಲ ಎಂದು ತಿಳಿಸಿದರು.













