(ನ್ಯೂಸ್ ಕಡಬ) newskadaba.com ಅ. 15. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಂಡೋಸಲ್ಫಾನ್ ಸಂತ್ರಸ್ತರಿಗಾಗಿ ನಡೆಯಲಿರುವ ವಿಶೇಷ ಆರೋಗ್ಯ ತಪಾಸಣಾ ಶಿಬಿರಗಳನ್ನು ಜಿಲ್ಲೆಯ ಖಾಸಗಿ ವೈದ್ಯಕೀಯ ಕಾಲೇಜುಗಳ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿದೆ.
ಅಕ್ಟೋಬರ್ 15 ರಂದು ಬೆಳ್ತಂಗಡಿ ತಾಲೂಕಿನ ಕೊಕ್ಕಡ ಹಾಗೂ ಅಕ್ಟೋಬರ್ 18 ರಂದು ಪುತ್ತೂರು ತಾಲೂಕಿನ ಪಾಣಾಜೆ ಹಾಗೂ ಅಕ್ಟೋಬರ್ 21 ರಂದು ಬೆಳ್ತಂಗಡಿ ತಾಲೂಕಿನ ಕಣಿಯೂರು, ಪುತ್ತೂರು ತಾಲೂಕಿನ ಕೊಯಿಲ, ಉಪ್ಪಿನಂಗಡಿ, ಸುಳ್ಯ ತಾಲೂಕಿನ ಬೆಳ್ಳಾರೆ ಆರೋಗ್ಯ ಕೇಂದ್ರಗಳಲ್ಲಿ ಏರ್ಪಡಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಡಬ: ಎಂಡೋಸಲ್ಫಾನ್ ಸಂತ್ರಸ್ತರಿಗೆ ವಿಶೇಷ ಶಿಬಿರ








