ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಹಸಿರು ಪಟಾಕಿ ಸಿಡಿಸಲು ಸುಪ್ರೀಂ ಕೋರ್ಟ್ ಅನುಮತಿ



(ನ್ಯೂಸ್ಕಡಬ) newskadaba.com,  ಅ.15 ನವದೆಹಲಿ: ದೆಹಲಿಯಲ್ಲಿ ಹಸಿರು ಪಟಾಕಿ ಸಿಡಿಸಲು ಸುಪ್ರೀಂ (Supreme Court) ಅವಕಾಶ ನೀಡಿದೆ. ಅಕ್ಟೋಬರ್ 18ರಿಂದ 21ರವರೆಗೆ ಹಸಿರು ಪಟಾಕಿ ಸಿಡಿಸಲು ಸುಪ್ರೀಂ ಅನುಮತಿ ನೀಡಿದೆ. ಪಟಾಕಿ ಸಿಡಿಸುವ ಬಗ್ಗೆ ಸಮತೋಲನದ ತೀರ್ಮಾನ ಕೈಗೊಳ್ಳಬೇಕಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.







ದೆಹಲಿ ಹಾಗೂ ರಾಷ್ಟ್ರ ರಾಜಧಾನಿ ವಲಯದ ನಗರಗಳಲ್ಲಿ ಪಟಾಕಿ ಸಿಡಿತದಿಂದ ವಾಯು ಮಾಲಿನ್ಯ ಮಿತಿ ಮೀರುತ್ತದೆ. ಮೂರು ನಾಲ್ಕು ದಿನಗಳವರೆಗೂ ಜನರು ಮನೆಯಿಂದ ಹೊರ ಬರಲು ಸಾಧ್ಯವಾಗದಂಥ ಸ್ಥಿತಿ ನಿರ್ಮಾಣವಾಗುತ್ತದೆ. ಮನೆಯಿಂದ ಹೊರ ಬಂದರೆ, ಕಣ್ಣು ಉರಿ, ಕಣ್ಣೀರು ಬರುತ್ತದೆ. ಅಷ್ಟರ ಮಟ್ಟಿಗೆ ದೆಹಲಿಯಲ್ಲಿ ಪಟಾಕಿಗಳಿಂದ ವಾಯು ಮಾಲಿನ್ಯವಾಗುತ್ತದೆ. ಹೀಗಾಗಿ ಕೆಲವೊಮ್ಮೆ ಪಟಾಕಿ ಸಿಡಿಸಲು ನಿರ್ಬಂಧ ವಿಧಿಸಲಾಗುತ್ತದೆ. ಆದರೆ ಸುಪ್ರೀಂಕೋರ್ಟ್ ಈಗ ಹಸಿರು ಪಟಾಕಿಗೆ ಮಾತ್ರ ದೆಹಲಿಯಲ್ಲಿ ಅವಕಾಶ ನೀಡಿದೆ.






QR ಕೋಡ್‌ಗಳನ್ನು ಹೊಂದಿರುವ ಅನುಮೋದಿತ ಪಟಾಕಿಗಳನ್ನು ಮಾತ್ರ ಮಾರಾಟ ಮಾಡುವುದನ್ನು ಖಚಿತಪಡಿಸಿಕೊಳ್ಳಲು ಗಸ್ತು ತಂಡಗಳನ್ನು ರಚಿಸುವಂತೆ ನ್ಯಾಯಾಲಯ ಪೊಲೀಸ್ ಅಧಿಕಾರಿಗಳಿಗೆ ನಿರ್ದೇಶನ ನೀಡಿತು

error: Content is protected !!
Scroll to Top