ಬುಡೋಳಿ: ಸರಣಿ ಅಪಘಾತ ► ದ್ವಿಚಕ್ರ ವಾಹನ ಸವಾರ ಗಂಭೀರ

(ನ್ಯೂಸ್ ಕಡಬ) newskadaba.com ವಿಟ್ಲ, ಎ.25. ಮಾರುತಿ ಇಕೋ ಕಾರೊಂದು ಎರಡು ಅಕ್ಟಿವಾಗಳಿಗೆ ಢಿಕ್ಕಿ ಹಿಡೆದ ಪರಿಣಾಮ ಸವಾರನೋರ್ವ ಗಂಭೀರ ಗಾಯಗೊಂಡ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಎಂಬಲ್ಲಿ ಬುಧವಾರ ಸಂಜೆ ಸಂಭವಿಸಿದೆ.

ಉಪ್ಪಿನಂಗಡಿಯಿಂದ ಮಂಗಳೂರಿಗೆ ತೆರಳುತ್ತಿದ್ದ ಮಾರುತಿ ಈಕೋ ಕಾರು ಚಾಲಕನ ನಿಯಂತ್ರಣ ತಪ್ಪಿ ವಿರುದ್ಧ ದಿಕ್ಕಿನಲ್ಲಿ ಸಾಗುತ್ತಿದ್ದ ಎರಡು ದ್ವಿಚಕ್ರ ವಾಹನಗಳಿಗೆ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ಆಕ್ಟಿವಾ ಸವಾರ ಬುಡೋಳಿ ನಿವಾಸಿ ಸುಂದರ ಎಂಬವರು ಗಂಭೀರವಾಗಿ ಗಾಯಗೊಂಡಿದ್ದು, ಮಂಗಳೂರಿನ ಇಂಡಿಯಾನಾ ಆಸ್ಪತ್ರೆಗೆ ದಾಖಲಿಸಲಾಗಿದೆ.

Also Read  Selecting From The Very Best Essay Writing Service Reviews

error: Content is protected !!
Scroll to Top