ಇಂದಿನ ಹವಾಮಾನ ವರದಿ



(ನ್ಯೂಸ್ಕಡಬ) newskadaba.com,  .15: ರಾಜ್ಯಾದ್ಯಂತ ಇಂದು (ಅ.15) ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್‌ ಘೋಷಿಸಿದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಭಾಗಶಃ ಮೋಡ ಕವಿದ ಆಕಾಶವು ಇರಲಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ  ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29° C ಮತ್ತು 21° C ಆಗಿರಬಹುದು.







ಅ.15ರಂದು ಕರಾವಳಿ ಜಿಲ್ಲೆಗಳಲ್ಲಿ ಬುಧವಾರ ಹಗುರ ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಜಿಲ್ಲೆಗಳಲ್ಲಿ ಭಾರಿ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ ಸೇರಿ ವಿವಿಧ ಜಿಲ್ಲೆಗಳಲ್ಲಿ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ.






error: Content is protected !!
Scroll to Top