35 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಕೊನೆಗೂ ಅರೆಸ್ಟ್..!

crime, arrest, suspected


(ನ್ಯೂಸ್‌ ಕಡಬ) newskadaba.com ಅ. 15. 35 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿರುವ ಕುರಿತು ವರದಿಯಾಗಿದೆ.





 

ಬಂಧಿತ ಆರೋಪಿಯನ್ನು ಕೇರಳದ ತ್ರಿಶೂರ್‌ ಜಿಲ್ಲೆಯ ನಾಟಿ ಮನೆಯ ಬಾಲನ್(73) ಎಂದು ಗುರುತಿಸಲಾಗಿದೆ. 1990 ನೇ ವರ್ಷದಲ್ಲಿ ಸುಳ್ಯ ತಾಲ್ಲೂಕಿನ ಅಲೆಟ್ಟಿ ಗ್ರಾಮದ ನಾಗಪಟ್ಟಣ ಎಂಬಲ್ಲಿ ಅಕ್ರಮ ಕೂಟ ಸೇರಿ ಶಾಂತಪ್ಪ ಮತ್ತು ಸುಬ್ಬಯ್ಯ ರವರಿಗೆ ತಲ್ವಾರ್ ನಿಂದ ಕಡಿದು ತೀವ್ರ ಸ್ವರೂಪದ ರಕ್ತ ಗಾಯ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಪೊಲೀಸ್‌ ರಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.






ಸುಮಾರು 35 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಕೇರಳ ರಾಜ್ಯದ ತ್ರಿಶೂರ್ ನಿಂದ ದಸ್ತಗಿರಿ ಮಾಡಿ ಸುಳ್ಯದ JMFC ನ್ಯಾಯಾಲಯದ ನ್ಯಾಯಧೀಶರ ಮುಂದೆ ಹಾಜರುಪಡಿಸಲಾಗಿದೆ. ಸದರಿ ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

error: Content is protected !!
Scroll to Top