(ನ್ಯೂಸ್ ಕಡಬ) newskadaba.com ಅ. 15. ಆಯುರ್ವೇದ ಚಿಕಿತ್ಸೆಗೆಂದು ಕೇರಳಕ್ಕೆ ಬಂದಿದ್ದ ಕೀನ್ಯಾ ಮಾಜಿ ಪ್ರಧಾನಿ ರೈಲಾ ಒಡಿಂಗಾ(80) ಹೃದಯಸ್ತಂಭನದಿಂದ ಇಂದು ಮುಂಜಾನೆ ಕೊನೆಯುಸಿರೆಳೆದಿದ್ದಾರೆ.
ರೈಲಾ ಒಡಿಂಗಾ ಅವರು ಆಯುರ್ವೇದ ಚಿಕಿತ್ಸೆಗೆಂದು ಕೇರಳದ ಎರ್ನಾಕುಲಂ ಜಿಲ್ಲೆಯ ಕೂಥಾಟುಕುಳಂಗೆ ಬಂದಿದ್ದರು. ಇಂದು ಮುಂಜಾನೆ ವಾಕಿಂಗ್ ಮಾಡುತ್ತಿದ್ದ ವೇಳೆ ಹಠಾತ್ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಕೂಥಾಟುಕುಳಂನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಗ್ಗೆ ಸುಮಾರಿಗೆ ಅವರು ನಿಧನರಾಗಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.










