ಸಮುದ್ರದಲ್ಲಿ ಮುಳುಗಿ ಮೂವರು ಬಾಲಕರು ಮೃತ್ಯು..!



(ನ್ಯೂಸ್‌ ಕಡಬ) newskadaba.com ಅ. 15. ಸಮುದ್ರದಲ್ಲಿ ಈಜಲು ಹೋಗಿ ಮೂವರು ಅಪ್ರಾಪ್ತ ಬಾಲಕರು ಮುಳುಗಿ ಮೃತಪಟ್ಟಿರುವ ಘಟನೆ ಬೈಂದೂರು ತಾಲ್ಲೂಕಿನ ಕಿರಿಮಂಜೇಶ್ವರ ಗ್ರಾಮದ ಬಳಿಯ ಕೊಡೇರಿ ಹೊಸಹಿತ್ಲುವಿನ ಕರಾವಳಿಯಲ್ಲಿ ನಡೆದಿದೆ.





 

ಮೃತ ಬಾಲಕರನ್ನು ಸಂಕೇತ್‌ (16), ಸೂರಜ್‌ (15) ಮತ್ತು ಆಶಿಶ್‌ (14) ಎಂದು ಗುರುತಿಸಲಾಗಿದೆ. ನಾಲ್ವರು ಅಪ್ರಾಪ್ತ ಬಾಲಕರು ಆಟವಾಡುತ್ತಾ ಸಮುದ್ರದಲ್ಲಿ ಈಜಾಡುತ್ತಿದ್ದ ವೇಳೆ ಮುಳುಗಿದ್ದು, ಹೊರಗೆ ಬರಲು ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ. ಆದರೆ ಓರ್ವ ಬಾಲಕ ಈಜಿ ದಡ ಸೇರಿದ ನಂತರ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ ಎನ್ನಲಾಗಿದೆ.






ಕಾರ್ಯಾಚರಣೆ ನಡೆಸಿ ಮೂವರು ಬಾಲಕರ ಮೃತದೇಹಗಳನ್ನು ಪತ್ತೆ ಹಚ್ಚಲಾಗಿದ್ದು, ಸ್ಥಳೀಯ ಪೊಲೀಸರು ಘಟನೆ ಕುರಿತು ಮಾಹಿತಿ ಕಲೆ ಹಾಕುತ್ತಿದ್ದಾರೆ. ಮೃತರ ಕುಟುಂಬಗಳಿಗೆ ಮಾಹಿತಿ ನೀಡಲಾಗಿದ್ದು, ದುರಂತಕ್ಕೆ ಕಾರಣವೇನು ಎಂಬುದನ್ನು ಖಚಿತಪಡಿಸಿಕೊಳ್ಳಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

error: Content is protected !!
Scroll to Top