ಅಕ್ರಮ ಪಟಾಕಿ ದಾಸ್ತಾನು-ಮಾರಾಟ ಮಾಡಿದರೆ ಕಠಿಣ ಕ್ರಮ- ಕಮಿಷನರ್ ಎಚ್ಚರಿಕೆ



(ನ್ಯೂಸ್‌ ಕಡಬ) newskadaba.com ಅ. 15. ನಗರದಲ್ಲಿ ಪಟಾಕಿಗಳನ್ನು ಅಕ್ರಮವಾಗಿ ದಾಸ್ತಾನು ಅಥವಾ ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದಾಗಿ ನಗರ ಪೊಲೀಸ್‌‍ ಆಯುಕ್ತ ಸೀಮಂತ್‌ ಕುಮಾರ್‌ ಸಿಂಗ್‌ ಎಚ್ಚರಿಸಿದ್ದಾರೆ.







ಪ್ರತಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪರವಾನಿಗೆ ಪಡೆದಿರುವವರು ಮಾತ್ರ ಪಟಾಕಿಗಳನ್ನು ಸರಿಯಾದ ರೀತಿಯಲ್ಲಿ ದಾಸ್ತಾನು ಮಾಡಿಕೊಂಡು ಮಾರಾಟ ಮಾಡಬೇಕು. ನಿಯಮಗಳನ್ನು ಉಲ್ಲಂಘಿಸ ಬಾರದು ಎಂದು ಹೇಳಿದರು.






ಕುಂಬಳಗೂಡು ಠಾಣೆ ಪೊಲೀಸರು, ಈಗಾಗಲೇ ಅಕ್ರಮವಾಗಿ ದಾಸ್ತಾನು ಮಾಡಿದ್ದ ಪಟಾಕಿ ವಶಪಡಿಸಿಕೊಂಡಿರುವ ಬಗ್ಗೆ ಮಾಹಿತಿ ನೀಡಿದ ಅವರು, ಈ ಕುರಿತು ಸಂಬಂಧ ಪಟ್ಟ ಇಲಾಖೆ ಅಧಿಕಾರಿಗಳ ಜೊತೆ ಚರ್ಚಿಸಿ ಸಭೆ ನಡೆಸಿದ್ದೇವೆ ಎಂದರು.

ಬೆಂಗಳೂರು ನಗರಕ್ಕೆ ಡ್ರಗ್ಸ್ ಎಲ್ಲಿಂದ ಸರಬರಾಜು ಆಗುತ್ತಿದೆ ಎಂಬುವುದನ್ನು ಪತ್ತೆ ಹಚ್ಚಲು ಅಪರಾಧ ವಿಭಾಗದ ಜಂಟಿ ಪೊಲೀಸ್‌‍ ಆಯುಕ್ತರ ನೇತೃತ್ವದಲ್ಲಿ ತಂಡವನ್ನು ರಚಿಸಲಾಗಿದೆ. ಈ ತಂಡ ಈಗಾಗಲೇ ಕಾರ್ಯಾಚರಣೆ ನಡೆಸುತ್ತಿದೆ ಎಂದು ಹೇಳಿದರು.

error: Content is protected !!
Scroll to Top