ಲಾಭದಾಯಕ ಕೃಷಿಗಾಗಿ PMFME, PMDDKY ಬಳಸಿಕೊಳ್ಳಿ: ರೈತರಿಗೆ ಸೀತಾರಾಮನ್ ಕರೆ



(ನ್ಯೂಸ್ಕಡಬ) newskadaba.com,  .15: ಕೃಷಿಯನ್ನು ಲಾಭದಾಯಕ ಉದ್ಯಮವನ್ನಾಗಿ ಪರಿವರ್ತಿಸಲು ಪ್ರಧಾನ ಮಂತ್ರಿ ಸೂಕ್ಷ್ಮ ಆಹಾರ ಸಂಸ್ಕರಣಾ ಉದ್ಯಮಗಳ ಔಪಚಾರಿಕೀಕರಣ(PMFME) ಮತ್ತು ಪ್ರಧಾನ ಮಂತ್ರಿ ಧನ್ ಧಾನ್ಯ ಕೃಷಿ ಯೋಜನೆ(PMDDKY) ಗಳನ್ನು ರೈತರು ಸಂಪೂರ್ಣವಾಗಿ ಬಳಸಿಕೊಳ್ಳಬೇಕೆಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬುಧವಾರ ರೈತರಿಗೆ ಕರೆ ನೀಡಿದ್ದಾರೆ.







ಇಂದು ಕೊಪ್ಪಳ ಜಿಲ್ಲೆಯಲ್ಲಿ ರೈತರ ತರಬೇತಿ ಮತ್ತು ಸಾಮಾನ್ಯ ಸೌಲಭ್ಯ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ಕೇಂದ್ರ ಸಚಿವೆ, ಹೊಸ ಪೀಳಿಗೆಯ GST ಸುಧಾರಣೆ ರೈತರಿಗೂ ಹೆಚ್ಚು ಲಾಭದಾಯಕವಾಗಿದೆ ಎಂದು ಹೇಳಿದರು.






ನಿರ್ಮಲಾ ಸೀತಾರಾಮನ್ ಅವರ ಸಂಸದರ ಸ್ಥಳೀಯ ಪ್ರದೇಶ ಅಭಿವೃದ್ಧಿ(MPLAD) ನಿಧಿಯನ್ನು ಬಳಸಿಕೊಂಡು ರೈತರ ತರಬೇತಿ ಮತ್ತು ಸಾಮಾನ್ಯ ಸೌಲಭ್ಯ ಕೇಂದ್ರ ಸ್ಥಾಪಿಸಲಾಗಿದೆ.

error: Content is protected !!
Scroll to Top