ಎಪ್ರಿಲ್ 29 ರಂದು ಉಪರಾಷ್ಟ್ರಪತಿ ಮಂಗಳೂರಿಗೆ ► ಕರಾವಳಿಯಲ್ಲಿ ವಾಸ್ತವ್ಯ ಹೂಡಲಿರುವ ಎಂ. ವೆಂಕಯ್ಯ ನಾಯ್ಡು



(ನ್ಯೂಸ್ ಕಡಬ) newskadaba.com ಮಂಗಳೂರು, ಎ.26. ಭಾರತದ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡುರವರು ಎಪ್ರಿಲ್ 29 ರಂದು ಬೆಳಿಗ್ಗೆ 9.40ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ಬಳಿಕ ಹೆಲಿಕಾಪ್ಟರ್ ನಲ್ಲಿ ಕಾಸರಗೋಡಿಗೆ ತೆರಳಲಿದ್ದಾರೆ.







ಮಧ್ಯಾಹ್ನ 01 ಗಂಟೆಗೆ ಮಂಗಳೂರಿಗೆ ಹಿಂದಿರುಗುವ ಉಪರಾಷ್ಟ್ರಪತಿಗಳು ಅಂದು ರಾತ್ರಿ ನಗರದಲ್ಲಿ ವಾಸ್ತವ್ಯ ಹೂಡಲಿದ್ದು, ಎ.30 ರಂದು ಮಧ್ಯಾಹ್ನ 12.20 ಗಂಟೆಗೆ ವಿಶೇಷ ವಿಮಾನದ ಮೂಲಕ ಕೊಚ್ಚಿನ್‍ಗೆ ತೆರಳಲಿದ್ದಾರೆ. ಉಪರಾಷ್ಟ್ರಪತಿಗಳ ಪ್ರವಾಸ ನಿಮಿತ್ತ ಬುಧವಾರದಂದು ಜಿಲ್ಲಾಧಿಕಾರಿ ಡಾ. ಸಸಿಕಾಂತ್ ಸೆಂಥಿಲ್ ಅಧ್ಯಕ್ಷತೆಯಲ್ಲಿ ಉನ್ನತ ಅಧಿಕಾರಿಗಳ ಪೂರ್ವಭಾವಿ ಸಭೆಯು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯಿತು.






error: Content is protected !!
Scroll to Top