ಅಕ್ರಮ ಪಟಾಕಿ ಸಂಗ್ರಹ- ಪೊಲೀಸರ ದಾಳಿ



(ನ್ಯೂಸ್ ಕಡಬ) newdkadaba.com ಅ. 16. ಉಡುಪಿ ಜಿಲ್ಲೆಯ ವಿವಿಧೆಡೆ ಅಕ್ರಮ ಹಾಗೂ ಅಪಾಯಕಾರಿಯಾಗಿ ಸಂಗ್ರಹಿಸಲಾಗಿದ್ದ ಪಟಾಕಿ ಮಳಿಗೆಗಳಿಗೆ ದಾಳಿ ನಡೆಸಿದ ಪೊಲೀಸರು ಅಪಾರ ಪ್ರಮಾಣದ ಪಟಾಕಿಗಳನ್ನು ವಶಪಡಿಸಿಕೊಂಡಿರುವ ಕುರಿತು ವರದಿಯಾಗಿದೆ.





ಕಾರ್ಕಳ ನಗರ ಠಾಣಾ ವ್ಯಾಪ್ತಿಯ ಮಿಯ್ಯಾರು, ಬ್ರಹ್ಮಾವರ ಠಾಣಾ ವ್ಯಾಪ್ತಿಯ ಕುಂಜಾಲು ಹಾಗೂ ಕೋಟ ಪೊಲೀಸ್ ಠಾಣಾ ವ್ಯಾಪ್ತಿಯ ತೆಕ್ಕಟ್ಟೆ ಎಂಬಲ್ಲಿ ಪೊಲೀಸರು ದಾಳಿ ನಡೆಸಿ ಹೆಚ್ಚಿನ ಪ್ರಮಾಣದ ಪಟಾಕಿಗಳನ್ನು ವಶಪಡಿಸಿಕೊಂಡಿದ್ದಾರೆ.






ದೀಪಾವಳಿಯ ಹಿನ್ನೆಲೆಯಲ್ಲಿ ಅನಧಿಕೃತವಾಗಿ ಪಟಾಕಿ ಖರೀದಿ ಹಾಗೂ ಸಂಗ್ರಹ ಮಾಡುತ್ತಿರುವ ಮಾಹಿತಿ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ. ವಶಪಡಿಸಿಕೊಂಡ ಪಟಾಕಿಗಳನ್ನು ಪರವಾನಿಗೆ ಪಡೆದು ಸುರಕ್ಷಿತವಾಗಿ ಸಂಗ್ರಹಿಸಿ ನಂತರ ನಾಶಪಡಿಸಲಾಗುವುದು ಎಂದು ಉಡುಪಿ ಎಸ್ಪಿ ಹರಿರಾಂ ಶಂಕರ್ ತಿಳಿಸಿದ್ದಾರೆ.

error: Content is protected !!
Scroll to Top