ಪುತ್ತೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಪ್ರಕರಣ ► ಠಾಣೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಆರೋಪಿ

(ನ್ಯೂಸ್ ಕಡಬ) newskadaba.com ಪುತ್ತೂರು, ಎ.26. ಅಪ್ರಾಪ್ತ ವಯಸ್ಸಿನ ಬಾಲಕಿಗೆ ಕಳೆದ ಒಂದು ವರ್ಷದಿಂದ ಸಂದರ್ಭ ಸಿಕ್ಕಿದಾಗಲೆಲ್ಲ ಲೈಂಗಿಕ ಕಿರುಕುಳ ನೀಡುತ್ತಿದ್ದುದಲ್ಲದೆ ಯಾರಲ್ಲಾದರೂ ತಿಳಿಸಿದರೆ ಕೊಲ್ಲುವುದಾಗಿ ಬೆದರಿಕೆ ಹಾಕುತ್ತಿದ್ದ ಆರೋಪಿಯನ್ನು ಪುತ್ತೂರು ಪೊಲೀಸರು ಮಂಗಳವಾರದಂದು ಬಂಧಿಸಿದ್ದರು.

ಬಂಧಿತ ಆರೋಪಿಯನ್ನು ಪುತ್ತೂರು ಕಸಬಾ ಗ್ರಾಮದ ನೆಹರೂ ನಗರ ಮುರ ನಿವಾಸಿ ಶಂಷೇರ್ ಖಾನ್(50) ಎಂದು ಗುರುತಿಸಲಾಗಿದೆ. ಆರೋಪಿಯು ಬಂಧನದ ನಂತರ ಲಾಕಪ್ ಸರಳಿಗೆ ತನ್ನ ತಲೆಯನ್ನು ಗುದ್ದಿಕೊಂಡು ಆತ್ಮಹತ್ಯೆಗೆ ಯತ್ನಿಸಿ ತಲೆಗೆ ಗಾಯಗಳಾಗಿದ್ದು, ಚಿಕಿತ್ಸೆ ಕೊಡಿಸಲಾಗಿದೆ. ಈತ ಕಳೆದ ಒಂದು ವರ್ಷದಿಂದ ಸಂದರ್ಭ ಸಿಕ್ಕಾಗೆಲ್ಲ ಅಪ್ರಾಪ್ತ ವಯಸ್ಸಿನ ಬಾಲಕಿಯೋರ್ವಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದನೆನ್ನಲಾಗಿದ್ದು, ಅಡ್ಡಿ ಪಡಿಸಿದಾಗ ಹಲ್ಲೆ ನಡೆಸುತ್ತಿದ್ದನೆನ್ನಲಾಗಿದೆ. ರಾತ್ರಿ ಟಿ.ವಿ ಯಲ್ಲಿ ಉದ್ದೇಶಪೂರ್ವಕವಾಗಿ ಅಶ್ಲೀಲ ದೃಶ್ಯಾವಳಿಯನ್ನು ತೋರಿಸುತ್ತಿದ್ದುದಲ್ಲದೆ, ನಿದ್ದೆ ಮಾತ್ರೆಯನ್ನು ಕೊಟ್ಟು ಲೈಂಗಿಕ ಕ್ರಿಯೆಯನ್ನು ಮೊಬೈಲ್ ನಲ್ಲಿ ಚಿತ್ರೀಕರಿಸಿ ಎಲ್ಲರಿಗೂ ತೋರಿಸುವುದಾಗಿ ಬೆದರಿಕೆ ಹಾಕುತ್ತಿದ್ದ ಆರೋಪದಲ್ಲಿ ಬಾಲಕಿ ನೀಡಿದ ದೂರಿನಂತೆ ಆರೋಪಿಯನ್ನು ಬಂಧಿಸಿ, ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

Also Read  ಬಂಟ್ವಾಳ : ಪರಿಶಿಷ್ಟ ಜಾತಿ, ಪಂಗಡಗಳ ಪರಿಸರದಲ್ಲಿ ತ್ಯಾಜ್ಯ ಸಂಗ್ರಹ - ಉಗ್ರ ಹೋರಾಟದ ಎಚ್ಚರಿಕೆ

error: Content is protected !!
Scroll to Top