ಜಾತಿ ಸಮೀಕ್ಷೆಯಿಂದ ರಾಜ್ಯದ ಮಕ್ಕಳಿಗೆ ಊಟ–ಪಾಠ ಇಲ್ಲದಾಗಿದೆ- ಎಚ್. ವಿಶ್ವನಾಥ್



(ನ್ಯೂಸ್ಕಡಬ) newskadaba.com,  ಅ.18 ಮೈಸೂರು: ಕಾಂಗ್ರೆಸ್ ಆಡಳಿತದಲ್ಲಿ ರಾಜ್ಯದ ಶಿಕ್ಷಣ ಕ್ಷೇತ್ರವು “ಕೆಳಮಟ್ಟಕ್ಕೆ” ತಲುಪಿದ್ದು, ಜಾತಿ ಸಮೀಕ್ಷೆಯಿಂದ ರಾಜ್ಯದ ಮಕ್ಕಳಿಗೆ ಊಟ–ಪಾಠ ಇಲ್ಲದಾಗಿದೆ ವಿಧಾನ ಪರಿಷತ್ ಸದಸ್ಯ ಅಡಗೂರು ಎಚ್‌.ವಿಶ್ವನಾಥ್ ಅವರು ಟೀಕಿಸಿದ್ದಾರೆ.





ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಲಾ ಶಿಕ್ಷಣ ವ್ಯವಸ್ಥೆಯನ್ನು ಸರ್ಕಾರ ನಿರ್ವಹಿಸುತ್ತಿರುವ ರೀತಿಯನ್ನು ಟೀಕಿಸಿದರು,






‘ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗಾಗಿ ದಸರಾ ರಜೆಯನ್ನು ವಿಸ್ತರಿಸಿರುವುದು, ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದಲ್ಲಿ ಶಾಲಾ ಶಿಕ್ಷಣ ಅಧೋಗತಿಗೆ ಹೋಗುತ್ತಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. 2010 ರಲ್ಲಿ ಆಹಾರ ಹಕ್ಕು ಕಾಯ್ದೆಯನ್ನು ತಂದವರು ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್, ಆದರೆ, ಸಿದ್ದರಾಮಯ್ಯ ಅವರ ಆಡಳಿತದಲ್ಲಿ, ಶಿಕ್ಷಣ ಮತ್ತು ಮಧ್ಯಾಹ್ನದ ಬಿಸಿಯೂಟ ಕಾರ್ಯಕ್ರಮಗಳನ್ನು ನಿರ್ವಹಿಸುವಲ್ಲಿ ಸರ್ಕಾರ ವಿಫಲವಾದ ಕಾರಣ ಮಕ್ಕಳು ಹಸಿವಿನಿಂದ ಬಳಲುವಂತಾಗಿದೆ.

ಸಮೀಕ್ಷೆಯಿಂದ ರಾಜ್ಯದ ಮಕ್ಕಳಿಗೆ ಊಟ–ಪಾಠ ಇಲ್ಲದಾಗಿದೆ. ಉತ್ತರ ಕರ್ನಾಟಕದಲ್ಲಿ ಮಕ್ಕಳು ಹಸಿವಿನಿಂದ ಮಲಗುತ್ತಿದ್ದಾರೆ. ಶಾಲೆಗಳನ್ನು ಕೂಡಲೇ ಆರಂಭಿಸಬೇಕು. ಅಕ್ಷರ ಹಾಗೂ ಆರೋಗ್ಯವನ್ನು ಕಡೆಗಣಿಸಬಾರದು ಎಂದು ಆಗ್ರಹಿಸಿದರು.

error: Content is protected !!
Scroll to Top