(ನ್ಯೂಸ್ ಕಡಬ) newskadaba.com, ಅ.18 ಚಾಮರಾಜನಗರ: 27 ತಿಂಗಳುಗಳಿಂದ ವೇತನ ಸಿಗದ್ದಕ್ಕೆ ಬೇಸತ್ತು ನೀರುಗಂಟಿ (ವಾಟರ್‌ಮ್ಯಾನ್) ಆತ್ಮಹತ್ಯೆ ಮಾಡಿಕೊಂಡ ಘಟನೆಗೆ ಸಂಬಂಧಿಸಿದಂತೆ ಬೇಜವಾಬ್ದಾರಿತನದ ಆರೋಪದ ಮೇಲೆ ಗ್ರಾಮ ಪಂಚಾಯಿತಿ ಪಂಚಾಯತ್ ಅಭಿವೃದ್ದಿ ಅಧಿಕಾರಿ (ಪಿಡಿಒ)ಯನ್ನು ಅಮಾನತುಗೊಳಿಸಲಾಗಿದೆ.
.ಹೊಂಗನೂರು ಗ್ರಾಮ ಪಂಚಾಯತ್‌ನಲ್ಲಿ ವಾಟರ್‌ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದ ಮಾಜಿ ಪಂಚಾಯತ್ ಉದ್ಯೋಗಿ ಚಿಕ್ಕುಸನಾಯಕ ಅವರು ಪಂಚಾಯತ್ ಕಟ್ಟಡದ ಕಿಟಕಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು.ಡೆತ್ ನೋಟ್ ವೇತನ ನೀಡದೇ ನನಗೆ ರಜೆ ಕೊಡದೇ ಸತಾಯಿಸಿದ್ದಾರೆ. ವೇತನಕ್ಕೆ ಪಿಡಿಒ ರಾಮೇಗೌಡ ಸಹಿ ಹಾಕಿದರೂ ಗ್ರಾಮ ಪಂಚಾಯತ್ ಅಧ್ಯಕ್ಷರು ಸಹಿ ಮಾಡುತ್ತಿರಲಿಲ್ಲ. ನನ್ನ ಸಾವಿಗೆ ಪಿಡಿಒ ರಾಮೇಗೌಡ ಮತ್ತು ಗ್ರಾಮ ಪಂಚಾಯತ್ ಅಧ್ಯಕ್ಷೆ ಪತಿ ಮೋಹನ್ ಕಾರಣ ಎಂದು ಬರೆದಿದ್ದಾರೆ.
ಘಟನೆ ಹಿನ್ನೆಲೆಯಲ್ಲಿ ಚಾಮರಾಜನಗರ ಪೂರ್ವ ಪೊಲೀಸ್ ಠಾಣೆಯಲ್ಲಿ ಭಾರತೀಯ ದಂಡ ಸಂಹಿತೆ, 2023 ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿ ಎಫ್ಐಆರ್ ದಾಖಲಾಗಿದೆ.












