ಇಂದಿನ ಕರ್ನಾಟಕ ಹವಾಮಾನ ವರದಿ; ಧಾರಾಕಾರ ಮಳೆ ನಿರೀಕ್ಷೆ



(ನ್ಯೂಸ್ಕಡಬ) newskadaba.com,  ಅ.21 ಬೆಂಗಳೂರು: ರಾಜ್ಯದಲ್ಲಿ ಮುಂದಿನ 7 ದಿನ ರಾಜ್ಯದಾದ್ಯಂತ ಗುಡುಗು ಸಹಿತ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್‌ ಘೋಷಿಸಿದೆ.





ಇನ್ನು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 29°C ಮತ್ತು 21°C ಇರುವ ಸಾಧ್ಯತೆ ಇದೆ.






ಅ.21ರಂದು ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ತುಮಕೂರು, ಹಾಸನ, ರಾಮನಗರ ಜಿಲ್ಲೆಗಳಲ್ಲಿ ಭಾರಿ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬಳ್ಳಾರಿ, ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ಮಂಡ್ಯ, ಮೈಸೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಹಲವೆಡೆ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

error: Content is protected !!
Scroll to Top