ಬೆಂಗಳೂರು: ಎಲೆಕ್ಟ್ರಿಕ್‌ ಬಸ್‌ ಸಮಸ್ಯೆ ನಿವಾರಣೆಗೆ ಕೇಂದ್ರ ಸರ್ಕಾರಕ್ಕೆ ಮನವಿ -ರಾಮಲಿಂಗಾರೆಡ್ಡಿ



(ನ್ಯೂಸ್ಕಡಬ) newskadaba.com,  ಅ.25 ಬೆಂಗಳೂರು : ಎಲೆಕ್ಟ್ರಿಕ್‌ ಬಸ್‌ ಚಾಲಕರ ನಡವಳಿಕೆಯಿಂದ ಬಿಎಂಟಿಸಿ ಸೇವೆಗೆ ಆಗುತ್ತಿರುವ ಸಮಸ್ಯೆ ಬಗ್ಗೆ ವಿವರಿಸಿ ಇವಿ ಬಸ್‌ಗಳಿಗೆ ಖಾಸಗಿ ಚಾಲಕರನ್ನು ನೇಮಿಸುವ ವ್ಯವಸ್ಥೆ ರದ್ದು ಮಾಡುವಂತೆ ಕೋರಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ನಿರ್ಧರಿಸಿದ್ದಾರೆ.





ವೇತನ, ಭತ್ಯೆ ಹೆಚ್ಚಳ, ಬೋನಸ್‌ ನೀಡುವುದು ಸೇರಿದಂತೆ ವಿವಿಧ ಕಾರಣ ನೀಡಿ ಖಾಸಗಿ ಸಂಸ್ಥೆಯಿಂದ ನೇಮಕವಾಗಿರುವ ಬಿಎಂಟಿಸಿ ಎಲೆಕ್ಟ್ರಿಕ್‌ ಬಸ್‌ ಚಾಲಕರು ಕಳೆದ ಎರಡು ದಿನಗಳಿಂದ ಮುಷ್ಕರ ನಡೆಸುತ್ತಿದ್ದಾರೆ. ಇದರಿಂದ ಎರಡು ದಿನದಿಂದ 140ಕ್ಕೂ ಹೆಚ್ಚಿನ ಎಲೆಕ್ಟ್ರಿಕ್‌ ವಾಹನಗಳು ಡಿಪೋಗಳಲ್ಲೇ ನಿಂತಿದ್ದು, ಕಾರ್ಯಾಚರಣೆಗೊಂಡಿಲ್ಲ. ಅಲ್ಲದೆ, ಸಮಸ್ಯೆ ಬಗೆಹರಿಸುವಂತೆ ಖಾಸಗಿ ಸಂಸ್ಥೆಗಳಿಗೆ ಬಿಎಂಟಿಸಿ ಸೂಚನೆ ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ.






ಈ ಕಾರಣಕ್ಕಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಶುಕ್ರವಾರ ಬಿಎಂಟಿಸಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ.ಈ ವೇಳೆ ಅಧಿಕಾರಿಗಳು, ಬಿಎಂಟಿಸಿಗೆ ಗ್ರಾಸ್‌ ಕಾಸ್ಟ್‌ ಕಾಂಟ್ರ್ಯಾಕ್ಟ್‌ (ಜಿಸಿಸಿ) ಮಾದರಿಯಲ್ಲಿ ಎಲೆಕ್ಟ್ರಿಕ್‌ ಬಸ್‌ಗಳನ್ನು ಪಡೆಯಲಾಗುತ್ತಿದೆ. ಅದರಂತೆ ಬಸ್‌ಗಳನ್ನು ಪೂರೈಸುವ ಸಂಸ್ಥೆಯೇ ಅವುಗಳನ್ನು ನಿರ್ವಹಣೆ ಮಾಡಲಿದೆ ಹಾಗೂ ಅವುಗಳಿಗೆ ಚಾಲಕರನ್ನು ನೇಮಿಸಲಿದೆ. ಈ ವ್ಯವಸ್ಥೆಯು ಸಮಸ್ಯೆಗೆ ಕಾರಣವಾಗುತ್ತಿದೆ ಎಂದು ವಿವರಿಸಿದರು.

 

 

error: Content is protected !!
Scroll to Top