LPG ಗ್ಯಾಸ್ ಗೀಸರ್ ಸೋರಿಕೆ; ಇಬ್ಬರು ಸಹೋದರಿಯರು ಸಾವು

Crime


(ನ್ಯೂಸ್ಕಡಬ) newskadaba.com,  ..24:  ಗ್ಯಾಸ್ ಗೀಸರ್ ನಿಂದ ಎಲ್ ಪಿಜಿ ಸೋರಿಕೆಯಾಗಿ ಇಬ್ಬರು ಸಹೋದರಿಯರು ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.





ಗುಲ್ಫಾಮ್ (23) ಮತ್ತು ಆಕೆಯ ಸಹೋದರಿ ಸಿಮ್ರಾನ್ ತಾಜ್ (20) ಎಲ್ ಪಿಜಿ ಅನಿಲ ಸೇವಿಸಿ ಸ್ನಾನಗೃಹದಲ್ಲಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.






ಪಿರಿಯಾಪಟ್ಟಣದ ಜೋನಿಗೇರಿ ಬೀದಿಯಲ್ಲಿ ಅಲ್ತಾಫ್ ಪಾಷಾ ಮತ್ತು ಅವರ ಕುಟುಂದವರು ಬಾಡಿಗೆ ಮನೆಯಲ್ಲಿ ವಾಸವಾಗಿದ್ದಾರೆ. ಗುರುವಾರ ರಾತ್ರಿ ಸುಮಾರು 7ರ ಸಮಯದಲ್ಲಿ ಸಹೋದರಿಯರು ಒಟ್ಟಿಗೆ ಸ್ನಾನಕ್ಕೆ ತೆರಳಿದ್ದಾರೆ.

ಈ ವೇಳೆ ಸ್ನಾನದ ಕೋಣೆಯಲ್ಲಿ ಗ್ಯಾಸ್ ಗೀಸರ್ ಆನ್ ಮಾಡಿದ ತಕ್ಷಣ ಅದರಿಂದ ಬಿಡುಗಡೆಯಾದ ವಿಷಾನಿಲ ಸೇವನೆಯಿಂದ ಉಸಿರಾಡಲು ತೊಂದರೆ ಉಂಟಾಗಿ ತಕ್ಷಣ ಅಸ್ವಸ್ಥರಾಗಿ ಕುಸಿದು ಬಿದ್ದಿದ್ದರು. ಕೆಲ ಹೊತ್ತಾದರೂ ಸ್ನಾನದ ಕೋಣೆಯಿಂದ ಹೊರಗೆ ಬರದಿದ್ದಾಗ, ಕುಟುಂಬಸ್ಥರು ತೆರಳಿ ನೋಡಿದಾಗ ಇಬ್ಬರೂ ಕುಸಿದು ಬಿದ್ದಿದ್ದರು.

error: Content is protected !!
Scroll to Top