(ನ್ಯೂಸ್ ಕಡಬ) newskadaba.com, ಅ.25 ಬೆಂಗಳೂರು,: ಎಸ್ಎಸ್ಎಲ್ಸಿ, ದ್ವಿತೀಯ ಪಿಯುಸಿ ಮುಗಿಸಿ ಒಂದೊಳ್ಳೆ ಉದ್ಯೋಗ ಹೊಂದಬೇಕು ಅಂದುಕೊಂಡಿದ್ದೀರಾ? ಹಾಗಾದರೆ ಇಲ್ಲಿದೆ ಗುಡ್ನ್ಯೂಸ್. ಕೊಡಗು ಜಿಲ್ಲೆಯ ಖಾಲಿ ಇರುವ 215 ಅಂಗನವಾಡಿ ವರ್ಕರ್ (ಕಾರ್ಯಕರ್ತೆ) ಮತ್ತು ಹೆಲ್ಪರ್ (ಸಹಾಯಕಿ) ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪಾಸಾದವರು ಅರ್ಜಿ ಸಲ್ಲಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ತಿಳಿಸಿದೆ . ಆಸಕ್ತ ಮಹಿಳಾ ಮತ್ತು ಲಿಂಗತ್ವ ಅಲ್ಪಸಂಖ್ಯಾತ ಮಹಿಳಾ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ನವೆಂಬರ್ 13.
ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ
ಅಂಗನವಾಡಿ ವರ್ಕರ್ – 56 ಹುದ್ದೆ ಮತ್ತು ಅಂಗನವಾಡಿ ಹೆಲ್ಪರ್ – 221 ಹುದ್ದೆಗಳಿವೆ. ಅಂಗನವಾಡಿ ವರ್ಕರ್ ಹುದ್ದೆಗೆ ಅರ್ಜಿ ಸಲ್ಲಿಸುವವರು ದ್ವಿತೀಯ ಪಿಯುಸಿ ಮತ್ತು ಅಂಗನವಾಡಿ ಹೆಲ್ಪರ್ ಹುದ್ದೆಗೆ ಅರ್ಜಿ ಸಲ್ಲಿಸುವವರು 10ನೇ ತರಗತಿ ಪಾಸಾಗಿರಬೇಕು. ಸರ್ಕಾರದ ಅಂಗೀಕೃತ ಸಂಸ್ಥೆಯಿಂದ ಡಿಎಸ್ಇಆರ್ಟಿಯಿಂದ ಇಸಿಸಿಇ ಡಿಪ್ಲೊಮಾ ಕೋರ್ಸ್, ಜೆಒಸಿ ಕೋರ್ಸ್, ಎನ್ಟಿಟಿ ಕೋರ್ಸ್ ಅಥವಾ ಅಂಗನವಾಡಿ ಚಟುವಟಿಕೆಗೆ ಸಂಬಂಧಿಸಿದಂತೆ ಡಿಪ್ಲೊಮಾ ನ್ಯೂಟ್ರಿಷಿಯನ್, ಹೋಮ್ ಸೈನ್ಸ್ ಪ್ರಮಾಣ ಪತ್ರ, ನರ್ಸರಿ ಅಥವಾ ಪೂರ್ವ ಪ್ರಾಥಮಿಕ ತರಬೇತಿ ಪಡೆದ ಪ್ರಮಾಣ ಪತ್ರ ಹೊಂದಿದವರಿಗೆ ಅಂಗನವಾಡಿ ವರ್ಕರ್ ಹುದ್ದೆಗೆ ಆದ್ಯತೆ ನೀಡಲಾಗುತ್ತದೆ.
ವಯೋಮಿತಿ
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯ ಅಧಿಸೂಚನೆ ಪ್ರಕಾರ ಅಭ್ಯರ್ಥಿಯ ಕನಿಷ್ಠ ವಯಸ್ಸು 19 ವರ್ಷ ಮತ್ತು ಗರಿಷ್ಠ ವಯಸ್ಸು 35 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ರಿಯಾಯಿತಿ ಇದೆ.












